ಡಾಲಿ ಧನಂಜಯ್‌ ನಟನೆಯ ಹಲಗಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ
x

ಹಲಗಲಿ ಫಸ್ಟ್ ಲುಕ್ ರಿಲೀಸ್

ಡಾಲಿ ಧನಂಜಯ್‌ ನಟನೆಯ 'ಹಲಗಲಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ

ನಟ ಡಾಲಿ ಧನಂಜಯ ವೃತ್ತಿ ಪಯಣದಲ್ಲಿ ಮತ್ತೊಂದು ಮೈಲಿಗಲ್ಲು ಎನ್ನಲಾಗುತ್ತಿರುವ ಐತಿಹಾಸಿಕ 'ಹಲಗಲಿ' ಸಿನಿಮಾದಲ್ಲಿ ಅವರು ವಾರಿಯರ್‌ ಆಗಿ ಕಾಣಿಸಿಕೊಂಡಿದ್ದಾರೆ.


ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಸಿನಿಮಾದಲ್ಲಿ ಡಾಲಿ ಧನಂಜಯ ನಟಿಸುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 'ಹಲಗಲಿ' ಸಿನಿಮಾದ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ಡಾಲಿಗೆ ನಾಯಕಿಯಾಗಿ ಕಾಂತಾರ ಬೆಡಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಣದ ಬಹು ತಾರಾಗಣದ ಅದ್ಧೂರಿ ಬಜೆಟ್ ಚಿತ್ರ 'ಹಲಗಲಿ' ಸ್ವಾತಂತ್ರ್ಯ ವೀರರ ಕಥೆಯಾಗಿದೆ.

ನಟ ಡಾಲಿ ಧನಂಜಯ ವೃತ್ತಿ ಪಯಣದಲ್ಲಿ ಮತ್ತೊಂದು ಮೈಲಿಗಲ್ಲು ಎನ್ನಲಾಗುತ್ತಿರುವ ಐತಿಹಾಸಿಕ 'ಹಲಗಲಿ' ಸಿನಿಮಾದಲ್ಲಿ ಅವರು ವಾರಿಯರ್‌ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಡಾಲಿ ಧನಂಜಯ್ ಅವರನ್ನು ತೆರೆಯ ಮೇಲೆ ವಿಭಿನ್ನ ಪಾತ್ರಗಳಲ್ಲಿ ನೋಡಿ ಮೆಚ್ಚಿದ್ದ ಪ್ರೇಕ್ಷಕರು ಈಗ ಅವರನ್ನು ವೀರ ಯೋಧನಾಗಿ ಕಣ್ತುಂಬಿಸಿಕೊಳ್ಳಲಿದ್ದಾರೆ. ಈ ಬಾರಿ ಧನಂಜಯ ಬಿಲ್ಲು, ಬಾಣ, ಮದ್ದು ಗುಂಡುಗಳೊಂದಿಗೆ ಯುದ್ಧದ ಅಖಾಡಕ್ಕೆ ಇಳಿದಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾವಾರ್‌ ಮಾಡಿದ ನಮ್ಮ ರಾಜ್ಯದ ಹಲಗಲಿ ಎಂಬ ಊರಿನ ಬೇಡರ ಕುರಿತು ಕನ್ನಡಿಗರು ಓದಿರುವ ಮತ್ತು ಕೇಳಿರುವ ಸಂಗತಿಗಳನ್ನೇ ರೋಚಕವಾಗಿ ತೆರೆಗೆ ಇಡಲಾಗುತ್ತಿದೆ. ಕನ್ನಡ ನಾಡಿನ ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಸಿನಿಮಾದಲ್ಲಿ ಬಿಂಬಿಸಲು ಹೊರಟಿದ್ದಾರೆ ನಿರ್ದೇಶಕ ಸುಕೇಶ್‌ ಡಿ ಕೆ.

ಎರಡು ಭಾಗಗಳಲ್ಲಿ, ಮೂಡಿ ಬರಲಿರುವ ಈ ಸಿನಿಮಾ ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ. ಕನ್ನಡ ಸೇರಿ ಐದು ಭಾಷೆಯಲ್ಲಿ ಈ ಸಿನಿಮಾ ತೆರೆಕಾಣಲಿದೆ. ಬಳ್ಳಾರಿಯ ಯುವ ಉದ್ಯಮಿ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಕನ್ನಡದ ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ ಹಲಗಲಿ ಚಿತ್ರಕ್ಕೆ ಸಾಹಸ ನಿರ್ದೇಶಕ.

ಚಿತ್ರಕ್ಕಾಗಿ ನಾಲ್ಕೈದು ಬೃಹತ್ ಹಳ್ಳಿಯ ಸೆಟ್ ಗಳನ್ನು ಹಾಕಿರುವುದು ಮತ್ತೊಂದು ವಿಶೇಷ., ಹಲಗಲಿ ಗ್ರಾಮವನ್ನೇ ಮರುಸೃಷ್ಟಿಯ ಸೆಟ್ ಅನ್ನು ವಿಶೇಷವಾಗಿ ನಿರ್ಮಿಸಲಾಗಿದೆ. ಸ್ವಾತಂತ್ರ್ಯ ಪೂರ್ವದ ವೀರ ಸೇನಾನಿಗಳ ಹಾಗೂ ಹಲಗಲಿಯ ಬೇಡರ ಹೋರಾಟದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.

Read More
Next Story