ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ತಂದೆ-ಮಗಳಾಗಿ ದುನಿಯಾ ವಿಜಯ್, ಪುತ್ರಿ ರಿತನ್ಯಾ; ಪೋಸ್ಟರ್‌ ಬಿಡುಗಡೆ
x

ದುನಿಯಾ ವಿಜಯ್ ಪುತ್ರಿ ರಿತನ್ಯಾ

'ಲ್ಯಾಂಡ್ ಲಾರ್ಡ್' ಸಿನಿಮಾದಲ್ಲಿ ತಂದೆ-ಮಗಳಾಗಿ ದುನಿಯಾ ವಿಜಯ್, ಪುತ್ರಿ ರಿತನ್ಯಾ; ಪೋಸ್ಟರ್‌ ಬಿಡುಗಡೆ

ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲ್ಯಾಂಡ್ ಲಾರ್ಡ್ ಸಿನಿಮಾದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.


ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ `ಲ್ಯಾಂಡ್ ಲಾರ್ಡ್' ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಅಭಿನಯಿಸಿದ್ದು, ಶನಿವಾರ ( ಆ.30) ಆಕೆಯ ಹುಟ್ಟುಹಬ್ಬದ ಹಿನ್ನಲೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.

ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲ್ಯಾಂಡ್ ಲಾರ್ಡ್ ಸಿನಿಮಾದ ರಿತನ್ಯಾ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಿನಿಮಾವನ್ನು ಸಾರಥಿ ಫಿಲಂಸ್ ನಿರ್ಮಾಣ ಮಾಡುತ್ತಿದ್ದು, ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಲ್ಯಾಂಡ್ ಲಾರ್ಡ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸುತ್ತಿದೆ. ಈ ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ರಿತನ್ಯಾ ವಿಜಯ್ ಅವರಿಗೆ ಇದು ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ವಿಜಯ್‌ಯೊಂದಿಗೆ ಅಪ್ಪ ಮತ್ತು ಮಗಳಾಗಿಯೇ ಅಭಿನಯಿಸುತ್ತಿದ್ದಾರೆ.

Read More
Next Story