ಪಂಚಭೂತಗಳಲ್ಲಿ ಲೀನರಾದ ದ್ವಾರಕೀಶ್‌
x
ಇಹಲೋಕ ತ್ಯಜಿಸಿದ ಕನ್ನಡದ ಹಿರಿನಟ ದ್ವಾರಕೀಶ್‌

ಪಂಚಭೂತಗಳಲ್ಲಿ ಲೀನರಾದ ದ್ವಾರಕೀಶ್‌

ದ್ವಾರಕೀಶ್‌ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನಡೆದಿದೆ.


ಹೃದಯಘಾತದಿಂದಾಗಿ ಮಂಗಳವಾರ ( ಏಪ್ರಿಲ್‌ 16) ರ ಇಹಲೋಕ ತ್ಯಜಿಸಿದ್ದ ಕನ್ನಡದ ಹಿರಿನಟ, ನಿರ್ದೇಶಕ ಮತ್ತು ನಿರ್ಮಾಪಕ ದ್ವಾರಕೀಶ್‌ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನಡೆದಿದೆ.

ಬ್ರಾಹ್ಮಣ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ಸಲ್ಲಿಸಿದರು.

ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನು ತರಲಾಗಿತ್ತು. ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆದರು.

Read More
Next Story