ʼರೋಜಿʼ ಚಿತ್ರತಂಡಕ್ಕೆ ಒರಟ ಪ್ರಶಾಂತ್ ಸೇರ್ಪಡೆ
ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ʼರೋಜಿʼ ಚಿತ್ರತಂಡಕ್ಕೆ ಒರಟ ಪ್ರಶಾಂತ್ ಅವರು ಸೇರಿಕೊಂಡಿದ್ದಾರೆ.
ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ʼರೋಜಿʼ ಚಿತ್ರತಂಡಕ್ಕೆ ಒರಟ ಪ್ರಶಾಂತ್ ಅವರು ಸೇರಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ ʼಲಿಯೋʼ ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸ್ವಾಮಿ ಅಣ್ಣ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.
ಈ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಶೂನ್ಯ, ʼರೋಜಿʼ ಚಿತ್ರ ಸ್ಟೈಲೀಶ್ ಗ್ಯಾಂಗ್ ಸ್ಟರ್ ಡ್ರಾಮವಾಗಿದೆ. ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ʼಸ್ವಾಮಿ ಅಣ್ಣʼ ಎನ್ನುವುದು ಅವರ ಪಾತ್ರದ ಹೆಸರು. ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿದ್ದು, ಸದ್ಯದಲ್ಲೇ ಮಾಹಿತಿ ನೀಡುತ್ತೇನೆ ಎಂದರು.
ನನಗೆ ಬಹಳ ಅವಕಾಶಗಳು ಬಂದವು. ಆದರೆ, ನಾನು ಒಪ್ಪಿರಲಿಲ್ಲ. ಶೂನ್ಯ ಅವರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಹಾಗಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಯೋಗಿ ಅವರ ಜೊತೆಗೆ ಅಭಿನಯಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರುತ್ತಿದೆ ಎಂದು ಒರಟ ಪ್ರಶಾಂತ್ ತಿಳಿಸಿದರು.