ಇಡಿ ರೇಡ್‌ ಬೆನ್ನಲ್ಲೇ ಐಟಿ ದಾಳಿ- ನಟಿ ಶಿಲ್ಪಾ ಶೆಟ್ಟಿಗೆ ಮತ್ತೆ ತಲೆನೋವು
x

ಬೆಂಗಳೂರಿನ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್ ಗಾರ್ಡನ್ ಸಿಟಿ' ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇಡಿ ರೇಡ್‌ ಬೆನ್ನಲ್ಲೇ ಐಟಿ ದಾಳಿ- ನಟಿ ಶಿಲ್ಪಾ ಶೆಟ್ಟಿಗೆ ಮತ್ತೆ ತಲೆನೋವು

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಐಷಾರಾಮಿ ಪಬ್ ‘ಬ್ಯಾಸ್ಟಿಯನ್ ಗಾರ್ಡನ್ ಸಿಟಿ’ ಮೇಲೆ ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Click the Play button to hear this message in audio format

ಬೆಂಗಳೂರಿನಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ 'ಬ್ಯಾಸ್ಟಿಯನ್ ಗಾರ್ಡನ್ ಸಿಟಿ' ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಈ ಪಬ್‌ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಈ ಐಟಿ ದಾಳಿ ನಡೆದಿರುವುದು ಮಹತ್ವ ಪಡೆದಿದೆ.

ದಾಳಿಗೆ ನಿಖರ ಕಾರಣವೇನು ಎಂಬುದು ಅಧಿಕೃತವಾಗಿ ಇನ್ನು ತಿಳಿದುಬಂದಿಲ್ಲವಾದರೂ, ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಅಥವಾ ಅಕ್ರಮ ಹಣ ವರ್ಗಾವಣೆಯ ಶಂಕೆಯ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪಬ್ ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದ್ದರು. ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ (ತಡರಾತ್ರಿ 1:30 ರವರೆಗೆ) ಪಬ್ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದರು. ಬೆಂಗಳೂರು ನಗರದ ನಿಯಮದ ಪ್ರಕಾರ ಪಬ್‌ಗಳು ಮಧ್ಯರಾತ್ರಿ 1 ಗಂಟೆಯೊಳಗೆ ವ್ಯವಹಾರ ಸ್ಥಗಿತಗೊಳಿಸಬೇಕಿದೆ.

ವೈರಲ್‌ ಆದ ಗಲಾಟೆಯ ವಿಡಿಯೋ

ಡಿಸೆಂಬರ್ 11ರಂದು ಈ ಪಬ್‌ನಲ್ಲಿ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಾಜಿ ಬಿಗ್ ಬಾಸ್ ಸ್ಪರ್ಧಿಯೊಬ್ಬರ ಪತಿ ಎನ್ನಲಾದ ಉದ್ಯಮಿ ಸತ್ಯ ನಾಯ್ಡು ಮತ್ತು ಪಬ್ ಸಿಬ್ಬಂದಿ ನಡುವೆ ಬಿಲ್ಲಿಂಗ್ ವಿಚಾರವಾಗಿ ವಾಗ್ವಾದ ನಡೆದಿದ್ದು, ಇದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ. ಈ ಗಲಾಟೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಪೊಲೀಸರು ಪಬ್ ಮಾಲೀಕರು ಮತ್ತು ಮ್ಯಾನೇಜರ್ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದರು.

ಇದಲ್ಲದೆ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಹಿನ್ನೆಲೆಯಲ್ಲಿ, ಪಬ್‌ನ ಆರ್ಥಿಕ ವ್ಯವಹಾರಗಳ ಮೇಲೆ ಐಟಿ ಇಲಾಖೆಯೂ ಕಣ್ಣಿಟ್ಟಿದ್ದು, ತೆರಿಗೆ ಪಾವತಿಯಲ್ಲಿನ ವ್ಯತ್ಯಾಸಗಳ ಬಗ್ಗೆ ಆಂತರಿಕ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Read More
Next Story