ಮಾರ್ಚ್‌ 28ಕ್ಕೆ ʻಮನದ ಕಡಲುʼ ಸಿನಿಮಾ ತೆರೆಗೆ
x

ಮಾರ್ಚ್‌ ೨೮ರಂದು ಮನಕಡಲು ಸಿನಿಮಾ ತೆರೆಗೆ ಬರಲಿದೆ. 

ಮಾರ್ಚ್‌ 28ಕ್ಕೆ ʻಮನದ ಕಡಲುʼ ಸಿನಿಮಾ ತೆರೆಗೆ

ಹೊಸ ಹುಡುಗ ಸುಮುಖ ನಾಯಕನಾಗಿರುವ ಸಿನಿಮಾದ ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರ ತಾರಾಬಳಗವಿದೆ.


ʼಮುಂಗಾರುಮಳೆʼ, ʼಗಾಳಿಪಟʼ ಸಿನಿಮಾ ನಿರ್ದೇಶನ ಖ್ಯಾತಿಯ ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ʻಮನದ ಕಡಲುʼ ಮಾರ್ಚ್ 28ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಈಗಾಗಲೇ ಸಿನಿಮಾದ ಟೀಸರ್,‌ ಟ್ರೇಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನಗೆದ್ದಿದೆ. ಈ ಸಿನಿಮಾದ ನಾಯಕನಾಗಿ ಸುಮುಖ ಹಾಗೂ ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರ ತಾರಾಬಳಗವಿದೆ.

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ನಿರ್ಮಾಣ ಮಾಡಿದ್ದಾರೆ. ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ.

ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿದೆ.

ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.

Read More
Next Story