ಕಣ್ಣಪ್ಪ: ವಿಶೇಷ ಪಾತ್ರದಲ್ಲಿ ʼಬಾಹುಬಲಿʼ ಪ್ರಭಾಸ್‌
x

ಕಣ್ಣಪ್ಪ: ವಿಶೇಷ ಪಾತ್ರದಲ್ಲಿ ʼಬಾಹುಬಲಿʼ ಪ್ರಭಾಸ್‌


ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ ತಂಡಕ್ಕೆ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್‌ ಇಂಡಿಯನ್‌ , "ಬಾಹುಬಲಿ" ಹೀರೋ ಪ್ರಭಾಸ್!‌

ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ.

ಮುಖೇಷ್‌ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಣ್ಣಪ್ಪ ಸಿನಿಮಾ, ಬಹುಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಲಿದೆ. ಬಹು ಕೋಟಿ ವೆಚ್ಚದಲ್ಲೂ ಈ ಸಿನಿಮಾ ಮೂಡಿಬರುತ್ತಿದೆ. ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ.

ಕಳೆದ ಏಳು ವರ್ಷಗಳಿಂದ ಈ ಪ್ರಾಜೆಕ್ಟ್‌ ಸಲುವಾಗಿ ವಿಷ್ಣು ಮಂಚು ಶ್ರಮಿಸುತ್ತಿದ್ದಾರೆ. ಅಷ್ಟೇ ಅದ್ದೂರಿಯಾಗಿಯೇ ಅದನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಅದರಂತೆ ಸ್ಟಾರ್‌ ಕಲಾವಿದರನ್ನೇ ಆಯ್ಕೆ ಮಾಡಿಕೊಳ್ಳುತ್ತ ಕುತೂಹಲ ಮೂಡಿಸುತ್ತಿದೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Read More
Next Story