ರಜನಿಕಾಂತ್‌ ಆಸ್ಪತ್ರೆಗೆ ದಾಖಲು:  ಆರೋಗ್ಯ ಸ್ಥಿತಿ ಸ್ಥಿರ
x

ರಜನಿಕಾಂತ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಸ್ಥಿರ


ಹಿರಿಯ ನಟ ರಜನಿಕಾಂತ್(73) ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಮಂಗಳವಾರ ಆರೋಗ್ಯ ತಪಾಸನೆಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ರಜನಿಕಾಂತ್ ಅವರ ಕುಟುಂಬ ಅಥವಾ ಆಸ್ಪತ್ರೆಯಿಂದ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ 'ವೆಟ್ಟೈಯಾನ್' ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಸಮಯದಲ್ಲಿ ರಜನಿಕಾಂತ್ ಆರೋಗ್ಯ ಕೈ ಕೊಟ್ಟಿದೆ. ಸೆಪ್ಟೆಂಬರ್ 30 ರಾತ್ರಿ ರಜನಿ ಆಸ್ಪತ್ರೆಗೆ ದಾಖಲಾಗಿದ್ದು, ಸಿನಿಮಾ ಮಂದಿ ಹಾಗೂ ಅಭಿಮಾನಿಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ.

ರಜನಿಕಾಂತ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿಯಿಂದಲೇ ವೈದ್ಯರ ತಂಡ ರಜನಿ ತಪಾಸಣೆಗೆ ಮುಂದಾಗಿದ್ದರು. ಮೂಲಗಳ ಪ್ರಕಾರ ರಜನಿ ಕಾಂತ್‌ ಕಿಬ್ಬೊಟ್ಟೆ ಭಾಗದಲ್ಲಿ ಸ್ಟಂಟ್ ಅಳವಡಿಸಲಾಗಿದೆ.. ಇನ್ನೂ ಎರಡು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ರಜನಿಕಾಂತ್ ಇರಬೇಕಾಗಿದೆ ಎಂದು ಹೇಳಲಾಗುತ್ತಿದೆ.

ರಜನಿಕಾಂತ್ ಪತ್ನಿ ಲತಾ ಅವರು ರಜನಿ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದು ಲಕ್ಷಾಂತರ ಅಭಿಮಾನಿಗಳಿಗೆ ಸಮಧಾನ ತಂದಿದೆ. 2011 ರಿಂದ ರಜನಿಕಾಂತ್‌ ಮೂತ್ರಕೋಶ, ಶ್ವಾಸಕೋಶ, ನರಕ್ಕೆ ಸಂಬಂಧಿಸಿದ ಸಮಸ್ಯೆಗೆ ಚಿಕಿತ್ಯೆ ಪಡೆಯುತ್ತಿದ್ದಾರೆ.



Read More
Next Story