
ಸದ್ದಿಲ್ಲದೆ ಹಸೆಮಣೆ ಏರಿದ ಅಮೃತವರ್ಷಿನಿ ನಟಿ ರಜನಿ
ನಾವಿಬ್ಬರು ಫ್ರೆಂಡ್ಸ್ ಎನ್ನುತ್ತಲೇ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ರಜಿನಿ
ಸೋಮವಾರ ಸರಳವಾಗಿ ದೇವಸ್ಥಾನವೊಂದರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೇವಲ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಈ ಮದುವೆ ಶಾಸ್ತ್ರ ನಡೆದಿದೆ. ದಂಪತಿಗೆ ಎಲ್ಲರೂ ಶುಭ ಕೊರುತ್ತಿದ್ದಾರೆ.
ಅಮೃತವರ್ಷಿಣಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ನಟಿ ರಜಿನಿ ಸದ್ದಿಲ್ಲದೆ ಹಸೆಮಣೆ ಏರಿದ್ದಾರೆ. ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ರಜನಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ನಾವಿಬ್ಬರೂ ಫ್ರೆಂಡ್ಸ್ ಅಷ್ಟೇ’ ಎಂದು ಕೆಲ ತಿಂಗಳ ಹಿಂದೆ ರಜಿನಿ ಅವರು ಸ್ಪಷ್ಟನೆ ನೀಡಿದ್ದರು.
ರಜಿನಿ ಅವರು ನಟಿಸಿದ ‘ಅಮೃತವರ್ಷಿಣಿ’ ಅವರ ವೃತ್ತಿಜೀವನದಲ್ಲಿ ವಿಶೇಷ ಧಾರಾವಾಹಿ ಆಗಿ ಉಳಿದುಕೊಂಡಿದೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಬಳಿಕ ಅವರು ರಿಯಾಲಿಟಿ ಶೋಗಳಲ್ಲೂ ಕಾಣಿಸಿದರು. ಕೆಲವು ಶೋಗಳನ್ನು ಅವರು ನಿರೂಪಣೆ ಮಾಡಿದ್ದಾರೆ.
ರಜಿನಿ ಅವರು ಅರುಣ್ ವೆಂಕಟೇಶ್ ಹೆಸರಿನ ಜಿಮ್ ಟ್ರೇನರ್ ಜೊತೆ ವಿಡಿಯೋ ಮಾಡುತ್ತಿದ್ದರು. ಇವರ ಸೋಶಿಯಲ್ ಮಿಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ವೈರಲ್ ಆಗಿದ್ದವು. ಆದರೆ ತಮ್ಮ ಪ್ರೀತಿಯ ಬಗ್ಗೆ ಎಂದೂ ತಿಳಿಸಿರಲಿಲ್ಲ. ‘ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್. ವಿಡಿಯೋ ಪಾರ್ಟ್ನರ್ ಅಷ್ಟೇ. ಗೆಳೆಯನ ಮದುವೆ ಆದರೂ ತಪ್ಪಿಲ್ಲ. ಅವರು ಹಲವು ವರ್ಷಗಳಿಂದ ನಮ್ಮ ಜೊತೆ ಇದ್ದಿರುತ್ತಾರೆ. ಅವರು ನಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿರುತ್ತಾರೆ. ಅದೇ ರೀತಿ ಬೇರೆಯವರನ್ನು ಮದುವೆ ಆದರೂ ತಪ್ಪಿಲ್ಲ’ ಎಂದು ಈ ಹಿಂದೆ ತಿಳಿಸಿದ್ದರು.
ಇದೀಗ ಸೋಮವಾರ ಸರಳವಾಗಿ ದೇವಸ್ಥಾನವೊಂದರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೇವಲ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಈ ಮದುವೆ ಶಾಸ್ತ್ರ ನಡೆದಿದೆ. ದಂಪತಿಗೆ ಎಲ್ಲರೂ ಶುಭ ಕೊರುತ್ತಿದ್ದಾರೆ.

