ಶಿವರಾಜ್‌ಕುಮಾರ್‌ ನಟನೆಯ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!
x
‘45’ ಪೋಸ್ಟರ್

ಶಿವರಾಜ್‌ಕುಮಾರ್‌ ನಟನೆಯ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

ನಟ ಶಿವರಾಜಕುಮಾರ್‌ ಅವರ ಹುಟ್ಟಹಬ್ಬದ ಪ್ರಯುಕ್ತ ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ‘45’ ಪೋಸ್ಟರ್ ಟೀಸರ್ ಅನ್ನು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.


Click the Play button to hear this message in audio format

ನಟ ಶಿವರಾಜ್‌ ಕುಮಾರ್‌ ಅವರ ಹುಟ್ಟಹಬ್ಬದ ಪ್ರಯುಕ್ತ ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ‘45’ ಪೋಸ್ಟರ್ ಟೀಸರ್ ಅನ್ನು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಇದು ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಮೊದಲ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ಇದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ.

ಇದೀಗ ನಟ, ನಿರ್ದೇಶಕ ರಿಷಬ್ ಶೆಟ್ಟಿ ಶಿವಣ್ಣ ನಟನೆಯ ‘45’ ಸಿನಿಮಾದ ಪೋಸ್ಟರ್ ಟೀಸರ್ ಅನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಓಜಿ (ಒರಿಜಿನಲ್ ಗ್ಯಾಂಗ್​ಸ್ಟರ್) ಮತ್ತೆ ಪರಿಚಯಿಸುತ್ತಿದ್ದೇವೆ’ ಎಂಬ ಅಡಿಬರಹದೊಂದಿಗೆ ಟೀಸರ್ ವಿಡಿಯೊ ಶಿವರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ಶಿವಣ್ಣ ಈ ಸಿನಿಮಾದಲ್ಲಿಯೂ ಖಡಕ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

Read More
Next Story