
ರಿಷಭ್ ಶೆಟ್ಟಿ ನಿರ್ಮಾಣದ `ಲಾಫಿಂಗ್ ಬುದ್ಧ' ಈ ವಾರ ತೆರೆಗೆ
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ ʻಲಾಫಿಂಗ್ ಬುದ್ಧʼ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ `ಲಾಫಿಂಗ್ ಬುದ್ಧ' ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ.
ಪೊಲೀಸ್ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.
ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ ʻಲಾಫಿಂಗ್ ಬುದ್ಧʼ ಚಿತ್ರಕ್ಕಿದೆ.