
ಕನಕವತಿಯಾದ ನಟಿ ರುಕ್ಮಿಣಿ ವಸಂತ್
‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಕನಕವತಿಯಾಗಿ ರುಕ್ಮಿಣಿ ವಸಂತ್; ಫಸ್ಟ್ ಲುಕ್ ಬಿಡುಗಡೆ
ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್ ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ.
ʻಕಾಂತಾರʼ ಸಿನಿಮಾದ ಪ್ರೀಕ್ವೆಲ್ ʻಕಾಂತಾರ ಚಾಪ್ಟರ್ 1’ ಚಿತ್ರವು ಇದೇ ವರ್ಷ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ ʻಕನಕವತಿʼ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಲ್ಲಿ ʻಕನಕವತಿʼಯ ಫಸ್ಟ್ ಲುಕ್ ರಿಲೀಸ್ ಆಗಿದೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿರುವ ಬಹುನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನದಂದು ಚಿತ್ರತಂಡವು ಅವರ ಫಸ್ಟ್ ಲುಕ್ ರಿವೀಲ್ ಮಾಡಿದೆ. ಈ ಚಿತ್ರವು 2022ರಲ್ಲಿ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ಗಳಿಸಿದ್ದ 'ಕಾಂತಾರ' ಚಿತ್ರದ ಕಥೆಗೆ ಮತ್ತಷ್ಟು ಆಳವಾದ ಹಿನ್ನೆಲೆಯನ್ನು ನೀಡಲಿದೆ.
ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್ ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಇದೀಗ 'ಕನಕವತಿ'ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ರುಕ್ಮಿಣಿ ವಸಂತ್ ಅವರ ಪೋಸ್ಟರ್ ಇದೀಗ ಎಲ್ಲೆಡೆ ಭಾರೀ ವೈರಲ್ ಆಗಿದೆ.
'ಕಾಂತಾರ ಚಾಪ್ಟರ್ 1' ಚಿತ್ರವು ಅಕ್ಟೋಬರ್ 2, 2025 ರಂದು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಬಿ ಅಜನೀಶ್ ಲೋಕನಾಥ್ ಅವರ ಸಂಗೀತ ನೀಡಿದ್ದಾರೆ.