Sandalwood| ಏಪ್ರಿಲ್ 17 ಕ್ಕೆ ʼಎಲ್ರ ಕಾಲೆಳಿಯತ್ತೆ ಕಾಲ; ಚಂದನ್‌ ಶೆಟ್ಟಿ ನಟನೆಯ ಚೊಚ್ಚಲ ಚಿತ್ರ
x
ಚಂದನ್‌ ಶೆಟ್ಟಿ, ಅರ್ಚನಾ ಕೊಟ್ಟಿಗೆ

Sandalwood| ಏಪ್ರಿಲ್ 17 ಕ್ಕೆ ʼಎಲ್ರ ಕಾಲೆಳಿಯತ್ತೆ ಕಾಲ'; ಚಂದನ್‌ ಶೆಟ್ಟಿ ನಟನೆಯ ಚೊಚ್ಚಲ ಚಿತ್ರ

ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗಲಿದೆ ಎಂಬುದನ್ನು ʼಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಲಾಗಿದೆ ಎಂಬುದು ಚಿತ್ರತಂಡದ ಮಾತು.


ಹಾಸ್ಯ ನಟ ಸುಜಯ್ ಶಾಸ್ತ್ರಿ ನಿರ್ದೇಶಿಸಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಇದೇ ಏ.17 ರಂದು ತೆರೆಯ ಮೇಲೆ ರಾರಾಜಿಸಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡವು "ಮಾತು ಮಧುರ" ಎಂಬ ಹಾಡನ್ನು ಆನಂದ್ ಆಡಿಯೋ ಮೂಲಕ ಅನಾವರಣಗೊಳಿಸಿತು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸುಜಯ್‌ ಶಾಸ್ತ್ರಿ, "ಕಾರಣಾಂತರದಿಂದ ಚಿತ್ರ ಬಿಡುಗಡೆ ತಡವಾಗಿದೆ. ಈಗ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದೆ" ಎಂದು ಹೇಳಿದರು.

"ಇದೊಂದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನಕಪುರದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣವಾಗಿದೆ. ಸಮಯದ ಮಹತ್ವ ಸಾರುವ ಈ ಚಿತ್ರಕ್ಕೆ ರಾಜಗುರು ಹೊಸಕೋಟೆ ಕಥೆ ಬರೆದಿದ್ದಾರೆ. ಕಥೆಗೆ ಶೀರ್ಷಿಕೆ ಪೂರಕವಾಗಿದೆ. ಇದು ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಅರ್ಚನಾ ಕೊಟ್ಟಿಗೆ ಈ ಚಿತ್ರದ ನಾಯಕಿಯಾಗಿದ್ದಾರೆ. ದತ್ತಣ್ಣ, ತಾರಾ ಅನುರಾಧ, ಮಂಜು ಪಾವಗಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ" ಎಂದು ವಿವರಿಸಿದರು.

"ಇಂದು ಮಾತು ಮಧುರ ಹಾಡು ಬಿಡುಗಡೆ ಮಾಡಿದ್ದೇವೆ. ಚಿತ್ರಕ್ಕೆ ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗೋವಿಂದರಾಜು ಅವರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಕೌಟುಂಬಿಕ ಕಾಮಿಡಿ ಜಾನರ್‌ನ ಈ ಚಿತ್ರವು ಏ.17 ರಂದು ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ" ಎಂದರು.

"ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರಕ್ಕಾಗಿ ದೇಹದ ತೂಕ ಸಹ ಹೆಚ್ಚಿಸಿಕೊಂಡಿದ್ದೆ. ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ" ಎಂದು ನಾಯಕ ಚಂದನ್ ಶೆಟ್ಟಿ ಹೇಳಿದರು .

ʼಎಲ್ರ ಕಾಲೆಳಿಯತ್ತೆ ಕಾಲʼ ಚಿತ್ರತಂಡ

"ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೂರನೇ ಚಿತ್ರ. ಒಂದೊಳ್ಳೆ ಸಂದೇಶವಿರುವ ಚಿತ್ರವೂ ಹೌದು. ನಮ್ಮ ಚಿತ್ರವನ್ನು ಎಲ್ಲರು ಚಿತ್ರಮಂದಿರಗಳಲ್ಲೇ ನೋಡಿ ಎಂದರು" ನಿರ್ಮಾಪಕ ಗೋವಿಂದರಾಜು.

ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ "ಮಾತು ಮಧುರ" ಹಾಡನ್ನು ದರ್ಶನ್ ನಾರಾಯಣ್ ಹಾಗೂ ಅನುರಾಧಾ ಭಟ್ ಹಾಡಿದ್ದಾರೆ. ನಾಲ್ಕು ಹಾಡುಗಳು 90ರ ಕಾಲಘಟದ ಹಾಡುಗಳ ಹಾಗೆ ಇರುತ್ತವೆ. ಒಂದು ಪ್ರಮೋಷನ್ ಸಾಂಗ್ ಇರಲಿದೆ. ಅದನ್ನು ಚಂದನ್ ಶೆಟ್ಟಿ ಅವರೇ ಹಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕರಾದ ಪ್ರವೀಣ್ - ಪ್ರದೀಪ್ ತಿಳಿಸಿದರು.

ವಸಂತ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಮೆಸ್ ಓನರ್ ಎಂದು ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿದರು. ಚಿತ್ರ ಆರಂಭವಾದ ಕುರಿತು ಹಾಗೂ ಕಥೆ ಬಗ್ಗೆ ಕಥೆ ಬರೆದಿರುವ ರಾಜಗುರು ಹೊಸಕೋಟೆ ಮಾಹಿತಿ ನೀಡಿದರು.

Read More
Next Story