Rishab Shetty| ರಿಷಬ್ ಶೆಟ್ಟಿ ಇನ್‌ಸ್ಟಾಗ್ರಾಮ್‌ನಿಂದ ಆಪ್ತ ಗೆಳೆಯ ರಕ್ಷಿತ್ ಶೆಟ್ಟಿಯೂ ಔಟ್‌
x

'ಕಾಂತಾರ' ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅನ್‌ಫಾಲೋ ಮಾಡಿದ್ದ ರಿಷಬ್, ಈಗ ರಕ್ಷಿತ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಹಾಗೂ ನಟಿ ರುಕ್ಮಿಣಿ ವಸಂತ್ ಅವರನ್ನೂ ಪಟ್ಟಿಯಿಂದ ಕೈಬಿಟ್ಟಿದ್ದಾರೆ. 

Rishab Shetty| ರಿಷಬ್ ಶೆಟ್ಟಿ ಇನ್‌ಸ್ಟಾಗ್ರಾಮ್‌ನಿಂದ ಆಪ್ತ ಗೆಳೆಯ ರಕ್ಷಿತ್ ಶೆಟ್ಟಿಯೂ ಔಟ್‌

'ಕಾಂತಾರ' ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅನ್‌ಫಾಲೋ ಮಾಡಿದ್ದ ರಿಷಬ್, ಈಗ ರಕ್ಷಿತ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಹಾಗೂ ನಟಿ ರುಕ್ಮಿಣಿ ವಸಂತ್ ಅವರನ್ನೂ ಪಟ್ಟಿಯಿಂದ ಕೈಬಿಟ್ಟಿದ್ದಾರೆ.


Click the Play button to hear this message in audio format

ಖ್ಯಾತ ನಟ ಮತ್ತು ನಿರ್ದೇಶಕ, 'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ಒಂದು ನಡೆ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ರಿಷಬ್ ಶೆಟ್ಟಿ ಅವರು ತಮ್ಮ ಆಪ್ತ ಗೆಳೆಯ ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಹಲವು ಪ್ರಮುಖರನ್ನು ಏಕಾಏಕಿ ಅನ್‌ಫಾಲೋ ಮಾಡುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ರಿಷಬ್ ಶೆಟ್ಟಿ ಅವರ ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್‌ನಲ್ಲಿ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿದೆ. ಆರಂಭದಲ್ಲಿ ಅವರು 'ಕಾಂತಾರ' ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಖಾತೆಯನ್ನು ಅನ್‌ಫಾಲೋ ಮಾಡಿದ್ದರು. ಅದರ ಬೆನ್ನಲ್ಲೇ ಈಗ 'ಕಾಂತಾರ: ಚಾಪ್ಟರ್ 1' ಚಿತ್ರದ ನಾಯಕಿ ರುಕ್ಮಿಣಿ ವಸಂತ್, ಆಪ್ತ ಗೆಳೆಯ ರಾಜ್ ಬಿ. ಶೆಟ್ಟಿ ಹಾಗೂ ಸ್ಯಾಂಡಲ್‌ವುಡ್‌ನ 'ಸಿಂಪಲ್ ಸ್ಟಾರ್' ರಕ್ಷಿತ್ ಶೆಟ್ಟಿ ಅವರನ್ನೂ ಅನ್‌ಫಾಲೋ ಮಾಡಿದ್ದಾರೆ. ಸದ್ಯ ರಿಷಬ್ ಅವರು ಕೇವಲ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಹಾಗೂ ತಮ್ಮದೇ ಆದ ರಿಷಬ್ ಶೆಟ್ಟಿ ಫಿಲ್ಮ್ಸ್ ಸೇರಿದಂತೆ ಬೆರಳೆಣಿಕೆಯ ಖಾತೆಗಳನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.

ಈ ಬೆಳವಣಿಗೆಯಿಂದಾಗಿ ಅಭಿಮಾನಿಗಳಲ್ಲಿ ಹಲವು ಅನುಮಾನಗಳು ಮೂಡಿವೆ. ರಿಷಬ್ ಮತ್ತು ರಕ್ಷಿತ್ ಶೆಟ್ಟಿ ನಡುವೆ ಏನಾದರೂ ಭಿನ್ನಾಭಿಪ್ರಾಯ ಮೂಡಿದೆಯೇ ಅಥವಾ ಇದು ಯಾವುದಾದರೂ ಹೊಸ ಚಿತ್ರದ ಪ್ರಚಾರದ ತಂತ್ರವೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಆದರೂ ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್‌ನ ಮುಖ್ಯಸ್ಥ ವಿಜಯ್ ಕಿರಗಂದೂರು ಅವರನ್ನು ಇನ್ನೂ ಫಾಲೋ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಅಥವಾ ಸಂಬಂಧಪಟ್ಟ ಕಲಾವಿದರು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಸದ್ಯ ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮಾ ನಿರ್ದೇಶನದ 'ಜೈ ಹನುಮಾನ್' ಚಿತ್ರದಲ್ಲಿ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಬಹುನಿರೀಕ್ಷಿತ 'ಬೆಲ್ ಬಾಟಂ 2' ಮತ್ತು ತಮ್ಮದೇ ನಿರ್ದೇಶನದ 'ರುದ್ರಪ್ರಯಾಗ್' ಚಿತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ.

Read More
Next Story