SANJU WEDS GEETHA 2 | ಸಂಜು ವೆಡ್ಸ್ ಗೀತಾ 2 ಸಿನಿಮಾ ಜನವರಿ 10ಕ್ಕೆ ರಿಲೀಸ್‌!
x
ಸಂಜು ವೆಡ್ಸ್ ಗೀತಾ 2 ಸಿನಿಮಾ ಜನವರಿ 10 ಕ್ಕೆ ಬಿಡುಗಡೆಯಾಗಲಿದೆ.

SANJU WEDS GEETHA 2 | ಸಂಜು ವೆಡ್ಸ್ ಗೀತಾ 2 ಸಿನಿಮಾ ಜನವರಿ 10ಕ್ಕೆ ರಿಲೀಸ್‌!

ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ಈ ಸಿನಿಮಾವನ್ನು ತಯಾರಿಸಲಾಗಿದೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದೆ. ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾ ರಾಮ್ ಅಭಿನಯಿಸಿದ್ದಾರೆ.


Click the Play button to hear this message in audio format

ರಚಿತಾ ರಾಮ್‌ ಹಾಗೂ ಶ್ರೀನಗರ ಕಿಟ್ಟಿ ಮುಖ್ಯ ಭೂಮಿಕೆಯ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಜನವರಿ 10 ರಂದು ತೆರೆಕಾಣಲಿದೆ.

ನಾಗಶೇಖರ್ ನಿರ್ದೇಶನದ ಸಿನಿಮಾ ಗೆಲ್ಲುವ ಎಲ್ಲಾ ಲಕ್ಷಣಗಳಿವೆ. ಚಿತ್ರದ ಮೊದಲ ಭಾಗ 2011ರ ಏಪ್ರಿಲ್​ 1ರಂದು ತೆರೆಕಂಡು ಸೂಪರ್ ಹಿಟ್​ ಆಗಿತ್ತು. ನಾಗಶೇಖರ್ ನಿರ್ದೇಶನದ ಮೊದಲ ಭಾಗದಲ್ಲೂ ಶ್ರೀನಗರ ಕಿಟ್ಟಿ ಅಭಿನಯಿಸಿದ್ದರು. ಇವರಿಗೆ ಜೋಡಿಯಾಗಿ ರಮ್ಯಾ ಕಾಣಿಸಿಕೊಂಡಿದ್ದರು. ಆದರೆ ‘ಸಂಜು ವೆಡ್ಸ್​ ಗೀತಾ’ ಸಿನಿಮಾದಲ್ಲಿ ರಮ್ಯಾ ಅವರು ನಾಯಕಿ ಆಗಿದ್ದರು. ಆದರೆ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್ ನಾಯಕಿ. ಆದರೆ ಈ ಸಿನಿಮಾದ ಕಥೆಯೇ ಬೇರೆ ಎಂದು ರಚಿತಾ ರಾಮ್ ಅವರು ಹೇಳಿದ್ದಾರೆ. ಈ ಸಿನಿಮಾ ‘ಸಂಜು ವೆಡ್ಸ್​ ಗೀತಾ’ ಸಿನಿಮಾದ ಮುಂದುವರಿದಿರುವ ಭಾಗ ಅಲ್ಲ ಎಂದು ಇತ್ತೀಚಗೆ ನಡೆದ ಸುದ್ದಿಗೋಷ್ಠಿಯಲ್ಲಿ ನಟಿ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ.

ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ಈ ಸಿನಿಮಾವನ್ನು ತಯಾರಿಸಲಾಗಿದೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದೆ. ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಅತಿ ಹೆಚ್ಚು ರೇಶ್ಮೆ ಬೆಳೆಯುತ್ತಾರೆ. ಆದರೆ ಅದರ ಕ್ರೆಡಿಟ್ ಬೇರೊಂದು ಕಡೆ ಹೋಗುತ್ತಿದೆ. ಇದೇ ವಿಷಯವನ್ನು ತೆಗೆದುಕೊಂಡಿದ್ದೇನೆ ಎಂದು ನಿರ್ದೇಶಕ ನಾಗಶೇಖರ್ ತಿಳಿಸಿದ್ದಾರೆ.

ಇದುವರೆಗೆ ಆನಂದ್​ ಆಡಿಯೋ ಮೂಲಕ ಅನಾವರಣಗೊಂಡಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಚಿತ್ರದ ವಿಡಿಯೋ ಸಾಂಗನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿದ್ದಾರೆ. ಮಳೆಯಂತೇ ಬಾ.. ಶೀರ್ಷಿಕೆಯ ಹಾಡಿನ ಲಿರಿಕಲ್​​ ಮತ್ತು ಮೇಕಿಂಗ್​​​ ಈಗಾಗಲೇ ರಿಲೀಸ್​ ಆಗಿತ್ತು.

ಚಿತ್ರದ ವಿಶೇಷ ಪಾತ್ರದಲ್ಲಿ ನಟ ಚೇತನ್‌ಚಂದ್ರ ಹಾಗೂ ನಟಿ ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ವಿನೋದ್, ಸಂಪತ್ ಕುಮಾರ್ ತಾರಾಬಳಗದಲ್ಲಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸವಿದೆ. ಚಿತ್ರದಲ್ಲಿನ ಐದು ಹಾಡುಗಳನ್ನ ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ಹಾಡಿದ್ದಾರೆ.

Read More
Next Story