ಟಾಲಿವುಡ್‌ ಸ್ಟಾರ್‌ ರಾಮ್‌ಚರಣ್‌ ʻRC 16ʼ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌; ಫಸ್ಟ್‌ ಲುಕ್‌ ಔಟ್‌!
x
ಶಿವರಾಜ್‌ಕುಮಾರ್‌ ಅವರ ಜನುಮದಿನದಂದು ಫಸ್ಟ್‌ ಲುಕ್‌ ಪೋಸ್ಟರ್‌ ಅನಾವರಣಗೊಳಿಸಿದೆ.

ಟಾಲಿವುಡ್‌ ಸ್ಟಾರ್‌ ರಾಮ್‌ಚರಣ್‌ ʻRC 16ʼ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌; ಫಸ್ಟ್‌ ಲುಕ್‌ ಔಟ್‌!

ನಿರ್ದೇಶಕ ಬುಚ್ಚಿ ಬಾಬು ಸನಾ ಅವರ 16ನೇ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದು, ಈ ಸಿನಿಮಾಗೆ ತಾತ್ಕಾಲಿಕವಾಗಿ ʼRC 16ʼ ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನಿಮಾದಲ್ಲಿ ಶಿವರಾಜ್‌ ಕುಮಾರ್‌ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇದೀಗ ಚಿತ್ರತಂಡ ಶಿವರಾಜ್‌ಕುಮಾರ್‌ ಅವರ ಜನುಮದಿನ ಅಂಗವಾಗಿ ಅವರ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಅನಾವರಣಗೊಳಿಸಿದೆ.


Click the Play button to hear this message in audio format

ನಿರ್ದೇಶಕ ಬುಚ್ಚಿ ಬಾಬು ಸನಾ ಅವರ 16ನೇ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದು, ಈ ಸಿನಿಮಾಗೆ ತಾತ್ಕಾಲಿಕವಾಗಿ RC 16 ಎಂದು ಹೆಸರಿಡಲಾಗಿದೆ. ಇದೀಗ ಈ ಸಿನಿಮಾದಲ್ಲಿ ಶಿವರಾಜ್‌ ಕುಮಾರ್‌ ನಟಿಸುತ್ತಿರುವ ಸುದ್ದಿ ಹೊರಬಿದ್ದಿದ್ದು, ಶಿವರಾಜ್‌ಕುಮಾರ್‌ ಅವರ ಜನುಮದಿನದಂದು ಚಿತ್ರತಂಡ ಅವರ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಅನಾವರಣಗೊಳಿಸಿದೆ.

ಮೈತ್ರಿ ಮೂವಿ ಮೇಕರ್ಸ್ ಬೆಂಬಲದೊಂದಿಗೆ, ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಹೈ ಬಜೆಟ್‌ನಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಸ್ಪೋರ್ಟ್ಸ್ ಡ್ರಾಮಾ ಚಿತ್ರ ಇದಾಗಿದ್ದು, ಪ್ಯಾನ್-ಇಂಡಿಯಾ ಚಲನಚಿತ್ರವಾಗಲಿದೆ ಎಂದು ವರದಿಯಾಗಿದೆ. RC16 ತಂಡ ತೆಲುಗು ಚಿತ್ರರಂಗಕ್ಕೆ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಅವರನ್ನು ಸ್ವಾಗತಿಸಿದೆ.

ನಟ ಶಿವರಾಜ್‌ ಕುಮಾರ್ ಚಿತ್ರದಲ್ಲಿ ಅತ್ಯಂತ ಪ್ರಭಾವಶಾಲಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಶಿವ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಇಂದಿನ ವಿಶೇಷ ಸಂದರ್ಭದಲ್ಲಿ ಫಸ್ಟ್‌ ಲುಕ್‌ ಔಟ್‌ ಆಗಿದೆ. ಈ ಸುದ್ದಿಯಿಂದ ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಆರ್ ರತ್ನವೇಲು ಛಾಯಾಗ್ರಹಣ ಮಾಡಲಿದ್ದು, ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದಾರೆ. ಚಿತ್ರದ ಇತರ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈಗಾಗಲೇ ನಿರ್ದೇಶಕ ಶಂಕರ್ RC 15 ಚಿತ್ರದ ಟೈಟಲ್‌ ಮತ್ತು ಫಸ್ಟ್‌ ಲುಕ್‌ ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಗೇಮ್ ಚೇಂಜರ್ ಎಂದು ಹೆಸರಿಡಲಾಗಿದ್ದು, ಫಸ್ಟ್ ಲುಕ್ ನಲ್ಲಿ ನಟ ಸ್ಟೈಲಿಶ್ ಮತ್ತು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಸಿರಿಶ್ ಅವರು ನಿರ್ಮಿಸಿರುವ ಈ ಚಿತ್ರದಲ್ಲಿ ನಟ ಎಸ್ ಜೆ ಸೂರ್ಯ ಕೂಡ ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ.

Read More
Next Story