Shiva Rajkumar : ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ ಶಿವರಾಜ್ ಕುಮಾರ್
Shiva Rajkumar :ಡಿಸೆಂಬರ್ 18 ರಂದು ಬೆಂಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಮಾಡಿದ್ದ ಶಿವರಾಜ್ ಕುಮಾರ್ ಅವರಿಗೆ ಡಿಸೆಂಬರ್ 24ರಂದು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಿವರಾಜ್ ಕುಮಾರ್ 6 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಬೆಂಗಳೂರು: ಕ್ಯಾನ್ಸರ್ ಸಂಬಂಧಿ ಶಸ್ತ್ರ ಚಿಕಿತ್ಸೆಗೆಂದು ಅಮೆರಿಕಕ್ಕೆ ಹೋಗಿದ್ದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್(Shiva Rajkumar) ಅವರು ಭಾನುವಾರ ಬೆಳಗ್ಗೆ ತಾಯ್ನಾಡು ಬೆಂಗಳೂರಿಗೆ ಮರಳಿದ್ದಾರೆ.
ಮೂತ್ರಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮಿಯಾಮಿಯಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗಿರುವ ಶಿವಣ್ಣ ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್‌ಗೆ ಬಂದಿಳಿದಿದ್ದಾರೆ.
ನಟ ಶಿವರಾಜ್‌ಕುಮಾರ್ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಅವರನ್ನು ಸ್ವಾಗತಿಸಲು ಅಭಿಮಾನಿಗಳ ದಂಡೇ ಆಗಮಿಸಿತ್ತು. ಅಷ್ಟೇ ಅಲ್ಲದೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತಿಸಿದರು.
ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಈಗಾಗಲೇ ಬೆಂಗಳೂರಿಗೆ ವಾಪಾಗುವ ಬಗ್ಗೆ ವಿಡಿಯೋ ಮಾಹಿತಿ ಹಂಚಿಕೊಂಡಿದ್ದರು. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿಕೊಂಡಿದ್ದರು.
ಸಂಭ್ರಮಾಚರಣೆಗೆ ಇಲ್ಲ ಅವಕಾಶ
ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲಎಂದು ಅಧಿಕಾರಿಗಳು ಸೂಚನೆ ನೀಡಿದ್ದರು. ಶಿವರಾಜ್‌ಕುಮಾರ್ ಅಭಿಮಮಾನಿಗಳು ಸಾದಹಳ್ಳಿ ಟೋಲ್ ಬಳಿ ಅದ್ಧೂರಿ ಸ್ವಾಗತ ಮಾಡಿದರು. ಡಿಸೆಂಬರ್ 18 ರಂದು ಬೆಂಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಮಾಡಿದ್ದ ಶಿವರಾಜ್ ಕುಮಾರ್ ಅವರಿಗೆ ಡಿಸೆಂಬರ್ 24ರಂದು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಿವರಾಜ್ ಕುಮಾರ್ 6 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.