Shivarajkumar| ಅಮೆರಿಕದ ಕಡಲ ಕಿನಾರೆಯಲ್ಲಿ ಹ್ಯಾಟ್ರಿಕ್ ಹೀರೋ ಜಾಲಿ, ಜಾಲಿ...
Shivarajkumar: ಶಿವರಾಜ್‌ಕುಮಾರ್ ಡಿಸೆಂಬರ್ 24ರಂದು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರು ಕೆಲವು ದಿನ ಆಸ್ಪತ್ರೆಯಲ್ಲೇ ಇದ್ದು ಚೇತರಿಕೆ ಕಂಡಿದ್ದು ಸುತ್ತಾಟ ಆರಂಭಿಸಿದ್ದಾರೆ.
ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆಂದು ಅಮೆರಿಕಾಗೆ ತೆರಳಿರುವ ನಟ ಶಿವರಾಜ್ ಕುಮಾರ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಮೂತ್ರಕೋಶದ ಕ್ಯಾನ್ಸರ್‌ಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಪುನಶ್ಛೇತನಕ್ಕೆ ಒಳಗಾಗುತ್ತಿರುವ ಅವರು ಹೊರಗಡೆ ಸುತ್ತಾಟ ಆರಂಭಿಸಿದ್ದಾರೆ. ಅಂತೆಯೇ ಅಮೆರಿಕಾದ ಮಿಯಾಮಿ ಸಮುದ್ರ ತೀರದಲ್ಲಿ ಸುತ್ತಾಟ ನಡೆಸಿದ ಚಿತ್ರವನ್ನು ಅವರು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಶಿವರಾಜ್‌ಕುಮಾರ್ ಕಳೆದ ಡಿಸೆಂಬರ್ 18ರಂದು ಅಮೆರಿಕಕ್ಕೆ ತೆರಳಿದ್ದರು. ಡಿಸೆಂಬರ್ 24ರಂದು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರು ಕೆಲವು ದಿನ ಆಸ್ಪತ್ರೆಯಲ್ಲೇ ಇದ್ದು ಚೇತರಿಕೆ ಕಂಡಿದ್ದಾರೆ.
ಶಿವರಾಜ್ ಕುಮಾರ್ ಅವರು ಬೀಚ್‌ನಲ್ಲಿರುವ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಶಿವರಾಜ್‌ಕುಮಾರ್, ಪತ್ನಿ ಗೀತಾ, ಪುತ್ರಿ ಹಾಗೂ ಆಪ್ತರು ಅವರ ಜತೆ ಬೀಚ್‌ಗೆ ತೆರಳಿದ್ದಾರೆ. ಅಲ್ಲಿ ಶಿವಣ್ಣ ಫೋಟೋಗಳಿಗೆ ಫೋಸ್ ಕೊಟ್ಟಿದ್ದಾರೆ.
ಅಮೆರಿಕದ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಸರ್ಜರಿ ನಡೆದಿತ್ತು. ಅವರಿಗೆ ಎರಡು ಬಾರಿ ಮೆಡಿಕಲ್ ಚೆಕಪ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಸದ್ಯ ಅವರು ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ತಿಂಗಳ ಕೊನೆಯ ವಾರದವರೆಗೂ ಅಮೆರಿಕಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 26ರಂದು ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.