
ಓಂ ಪ್ರಕಾಶ್ ರಾವ್ ನಿರ್ದೇಶನದ ಮಹಿಳಾ ಪ್ರಧಾನ ಚಿತ್ರ ʻಫೀನಿಕ್ಸ್ʼ ಚಿತ್ರೀಕರಣ ಪೂರ್ಣ
ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಇದೀಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ 'ಫೀನಿಕ್ಸ್' ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಇದೀಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
ಬಹಳ ದಿನಗಳ ನಂತರ ಓಂಪ್ರಕಾಶ್ ರಾವ್ ಅವರ ನಿರ್ದೇಶನದಲ್ಲಿ 'ಫೀನಿಕ್ಸ್' ಸಿನಿಮಾ ಮೂಡಿಬರುತ್ತಿದ್ದು, ಓಂಪ್ರಕಾಶ್ ರಾವ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ.
ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿರುವ 'ಫೀನಿಕ್ಸ್' ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ಹೆಸರಾಂತ ಸಾಹಸ ನಿರ್ದೇಶಕರು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ.
ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ಶ್ರೀಧರ್, ಪ್ರಸನ್ನ, ವಿನೋದ್ ಕಿನ್ನಿ, ಮೇಘನಾ ಎಸ್ ಕೆ ಮುಂತಾದವರು ತಾರಾಬಳಗದಲ್ಲಿದ್ದಾರೆ.