ಅಭಿಮಾನಿಗಳಿಗೆ ಸಿಹಿ ಸುದ್ದಿ; ದಿ ಡೆವಿಲ್ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ; ಯಾವಾಗ ಬಿಡುಗಡೆ?
x

ದರ್ಶನ್‌ 

ಅಭಿಮಾನಿಗಳಿಗೆ ಸಿಹಿ ಸುದ್ದಿ; 'ದಿ ಡೆವಿಲ್' ಬಿಡುಗಡೆ ದಿನಾಂಕದಲ್ಲಿ ಬದಲಾವಣೆ; ಯಾವಾಗ ಬಿಡುಗಡೆ?

ಸೆಲೆಬ್ರಿಟಿಗಳ ಹಾಗೂ ಪ್ರೇಕ್ಷಕ ಪ್ರಭುಗಳ ಒತ್ತಾಯದ ಮೇರೆಗೆ 'ದಿ ಡೆವಿಲ್' ಸಿನಿಮಾ 12/12/2025ರಂದು ಬಿಡುಗಡೆ ಆಗಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ. ನಿಮ್ಮಪ್ರೀತಿ ಅಭಿಮಾನವೆ ನಮ್ಮ ಶ್ರೀರಕ್ಷೆ' ಎಂದು ಪೋಸ್ಟ್‌ ಮಾಡಿದ್ದಾರೆ.


Click the Play button to hear this message in audio format

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಸಿನಿಮಾ, 'ಚಾಲೆಂಜಿಂಗ್ ಸ್ಟಾರ್' ದರ್ಶನ್ (Darshan) ಅಭಿನಯದ 'ದಿ ಡೆವಿಲ್' (The Devil) ಬಿಡುಗಡೆಯ ದಿನಾಂಕದಲ್ಲಿ ಚಿತ್ರತಂಡ ಮಹತ್ವದ ಬದಲಾವಣೆ ಮಾಡಿದೆ. ಡಿಸೆಂಬರ್ 12ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಅಭಿಮಾನಿಗಳ ಮತ್ತು ಚಿತ್ರರಂಗದ ಗಣ್ಯರ ಒತ್ತಾಯದ ಮೇರೆಗೆ ಒಂದು ದಿನ ಮುಂಚಿತವಾಗಿ, ಅಂದರೆ ಡಿಸೆಂಬರ್ 11ರಂದೇ ವಿಶ್ವದಾದ್ಯಂತ ತೆರೆಕಾಣಲಿದೆ.

ಈ ಕುರಿತು ಶ್ರೀ ಜೈಮಾತಾ ಕಂಬೈನ್ಸ್ (Sri Jaimata Combines) ತನ್ನ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. "ಪ್ರೇಕ್ಷಕರ ಗಮನಕ್ಕೆ. ಸೆಲೆಬ್ರಿಟಿಗಳ ಹಾಗೂ ಪ್ರೇಕ್ಷಕ ಪ್ರಭುಗಳ ಒತ್ತಾಯದ ಮೇರೆಗೆ 'ದಿ ಡೆವಿಲ್' ಸಿನಿಮಾ 12/12/2025ರಂದು ಬಿಡುಗಡೆ ಆಗಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ. ನಿಮ್ಮ ಪ್ರೀತಿ, ಅಭಿಮಾನವೇ ನಮ್ಮ ಶ್ರೀರಕ್ಷೆ," ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟಪಡಿಸಿದೆ.

ಭರ್ಜರಿ ತಾರಾಗಣ ಮತ್ತು ತಾಂತ್ರಿಕ ವರ್ಗ

ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಆಕ್ಷನ್ ಎಂಟರ್​ಟೈನರ್​ನಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ರಚನಾ ರೈ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರ್ಮಿಳಾ ಮಾಂಡ್ರೆ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಜನಪ್ರಿಯ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ದರ್ಶನ್ ಅವರ ಸಿನಿಮಾಗೆ ಸಂಗೀತ ನೀಡುತ್ತಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ದರ್ಶನ್ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದರೂ, ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಯಾವುದೇ ಕೊರತೆ ಮಾಡುತ್ತಿಲ್ಲ. ಪತ್ನಿ ವಿಜಯಲಕ್ಷ್ಮಿ ಅವರು ಚಿತ್ರದ ಪ್ರಚಾರದ ನೇತೃತ್ವ ವಹಿಸಿಕೊಂಡಿದ್ದು, ಅಭಿಮಾನಿಗಳೊಂದಿಗೆ ಸಭೆಗಳನ್ನು ನಡೆಸಿ ಸಿನಿಮಾ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ. 'ಕ್ರಾಂತಿ' ಸಿನಿಮಾದಂತೆಯೇ ಈ ಚಿತ್ರಕ್ಕೂ ಅಭಿಮಾನಿಗಳೇ ಪ್ರಚಾರ ರಾಯಭಾರಿಗಳಾಗಿದ್ದಾರೆ.

Read More
Next Story