
ಝೈದ್ ಖಾನ್ ಮತ್ತು ಮಲೈಕಾ
ಝೈದ್ ಖಾನ್ ಅಭಿನಯದ 'ಕಲ್ಟ್' ಚಿತ್ರದ 'ಅಯ್ಯೋ ಶಿವನೇ' ಹಾಡು ಬಿಡುಗಡೆ
ಉಪಾಧ್ಯಕ್ಷ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಅನಿಲ್ ಕುಮಾರ್ 'ಕಲ್ಟ್' ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
ನಟ ಝೈದ್ ಖಾನ್ ಅವರ ನಟನೆಯ ಕಲ್ಟ್ ಸಿನಿಮಾದ ಅಯ್ಯೋ ಶಿವನೇ ಹಾಡು ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಿನಿಮಾದ ಅಯ್ಯೋ ಶಿವನೇ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡನ್ನು ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಝೈದ್ ಖಾನ್ ಹಾಗೂ ಮಲೈಕ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಹಾಡು ಬಿಡುಗಡೆಯಾಗುತ್ತಿದ್ದಂತೆ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಉಪಾಧ್ಯಕ್ಷ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಚಿತರಾಮ್ ಹಾಗೂ ಮಲೈಕಾ ಈ ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
Next Story