
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.
ಯಶ್ ಅಭಿನಯದ 'ಟಾಕ್ಸಿಕ್' ಟೀಸರ್‌ಗೆ ಕಾನೂನು ಸಂಕಷ್ಟ; ಆಗಿದ್ದೇನು?
ಚಿತ್ರಕ್ಕೆ 'A' ಪ್ರಮಾಣಪತ್ರ ನೀಡಬೇಕು ಮತ್ತು ಟೀಸರ್‌ನಲ್ಲಿರುವ ಆಕ್ಷೇಪಾರ್ಹ ದೃಶ್ಯಗಳನ್ನು ಕೂಡಲೇ ತೆಗೆದುಹಾಕಬೇಕು ಅಥವಾ ತಿದ್ದುಪಡಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟೀಸರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ 5 ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆಯುವ ಮೂಲಕ ದಾಖಲೆ ಬರೆದಿತ್ತು. ಆದರೆ ಇದೀಗ ಈ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟೀಸರ್‌ನಲ್ಲಿ ಅಶ್ಲೀಲತೆಯ ಅಂಶಗಳಿವೆ ಎಂದು ಆರೋಪಿಸಿ ವಕೀಲರಾದ ಲೋಹಿತ್ ಹನುಮಪುರ ಅವರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಅಧ್ಯಕ್ಷರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.
ಈ ದೂರಿನಲ್ಲಿ ಟೀಸರ್ ಸಾರ್ವಜನಿಕ ನೈತಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಮತ್ತು ವಿಶೇಷವಾಗಿ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಅಲ್ಲದೆ, ಇಂತಹ ವಿಷಯವಸ್ತುವನ್ನು ಹೊಂದಿರುವ ಚಿತ್ರವನ್ನು ಕೇವಲ 'A' ಪ್ರಮಾಣಪತ್ರದೊಂದಿಗೆ ಬಿಡುಗಡೆ ಮಾಡುವುದು ಸೂಕ್ತ ಎಂದು ಅವರು ಪ್ರತಿಪಾದಿಸಿದ್ದಾರೆ. ವಯಸ್ಕರಿಗೆ ಮೀಸಲಾದ ವಿಷಯಗಳನ್ನು ಒಳಗೊಂಡಿರುವ ಈ ಟೀಸರ್ ಅನ್ನು ಕೂಡಲೇ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ಅಥವಾ ಸೂಕ್ತ ತಿದ್ದುಪಡಿ ತರಲು ಚಿತ್ರದ ನಿರ್ಮಾಪಕರಿಗೆ ನಿರ್ದೇಶನ ನೀಡಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಒಂದು ವೇಳೆ ಸೆನ್ಸಾರ್ ಮಂಡಳಿಯು ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಮಂಡಳಿಯ ವಿರುದ್ಧವೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ನಟ ಯಶ್ ಅವರು 40ನೇ ಹುಟ್ಟುಹಬ್ಬದ ಅಂಗವಾಗಿ ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿತ್ತು. "ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್" ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಚಿತ್ರದ ಮೊದಲ ಟೀಸರ್‌ನಲ್ಲಿ ಬೋಲ್ಡ್ ಅವತಾರ ತಾಳಿದ್ದು, ಸೊಷಿಯಲ್ ಮಿಡಿಯಾದಲ್ಲಿ ಸಂಚಲನ ಎಬ್ಬಿಸಿತ್ತು.
ಟಾಕ್ಸಿಕ್ ಟೀಸರ್‌ನಲ್ಲಿ ಏನಿದೆ?
ಟೀಸರ್‌ನ ಆರಂಭದಲ್ಲಿ ಸ್ಮಶಾನವೊಂದರಲ್ಲಿ ಅಂತ್ಯಕ್ರಿಯೆ ನಡೆಯುತ್ತಿರುತ್ತದೆ. ಈ ವೇಳೆ ಬಂಧೂಕುಧಾರಗಳ ಗುಂಪೊಂದು ಸ್ಮಶಾನಕ್ಕೆ ಬೀಗ ಹಾಕಿ ಶಾಂತಿಯುತವಾಗಿ ಸಾಯಲು ಬಿಡಿ ಎಂದು ಎಚ್ಚರಿಸುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಕಾರೊಂದರಲ್ಲಿ ಕುಡುಕನ ಪ್ರವೇಶವಾಗುತ್ತದೆ. ಆತ ಕಾರಿನಿಂದ ಇಳಿಯುತ್ತಿದ್ದಂತೆ ಬಾಂಬ್ ಸ್ಫೋಟಿಸಲು ಸಜ್ಜಾಗುತ್ತಾನೆ. ವಿಭಿನ್ನವಾಗಿ ಮೂಡಿಬಂದಿರುವ ಈ ದೃಶ್ಯದಲ್ಲಿ ಕಾರು ಮೇಲಕ್ಕೆ ಕೆಳಕ್ಕೆ ಪುಟಿಯುತ್ತಾ ಒಳಗೆ ಏನೋ ನಡೆಯುತ್ತಿದೆ ಎಂಬ ಸುಳಿವು ನೀಡುತ್ತದೆ. ಕೊನೆಗೆ ಕಾರಿನಲ್ಲಿದ್ದ ಬಾಂಬ್ ಸ್ಫೋಟಗೊಂಡು ಗೂಂಡಾಗಳು ಬೆಂಕಿಗೆ ಆಹುತಿಯಾಗುತ್ತಾರೆ.

