
ವೈರಲ್ ಆಡಿಯೋ ವಿವಾದದ ಬೆನ್ನಲ್ಲೇ ನಟ ಧನ್ವೀರ್ ಗೌಡ ವಿರುದ್ಧ ಜೈದ್ ಖಾನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆಡಿಯೋದಲ್ಲಿ ಅವಹೇಳನಕಾರಿ ಮಾತುಗಳ ಆರೋಪ; ಧನ್ವೀರ್ ಗೌಡ ವಿರುದ್ಧ ಕೆಎಫ್‌ಸಿಸಿ ಮೆಟ್ಟಿಲೇರಲು ಮುಂದಾದ ಜೈದ್ ಖಾನ್
ಆಡಿಯೋದಲ್ಲಿನ ಹೇಳಿಕೆಗಳಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾದ ಜೈದ್ ಖಾನ್, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಇಂದು ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಧನ್ವೀರ್ ಗೌಡ ವಿರುದ್ಧ ಅಧಿಕೃತ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ವಿರುದ್ಧ ನಟ ಜೈದ್ ಖಾನ್ ಇಂದು ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಅಧಿಕೃತ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ವಿಚಾರವಾಗಿ ಜೈದ್ ಖಾನ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಧನ್ವೀರ್ ಗೌಡ ಅವರು ಜೈದ್ ಖಾನ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಅಲ್ಲದೆ, “ಜೈದ್ ಖಾನ್ ನನ್ನ ಕಾಲಿನ ಧೂಳಿಗೂ ಸಮನಲ್ಲ” ಎಂಬ ಹೇಳಿಕೆಯೂ ಆಡಿಯೋದಲ್ಲಿದೆ ಎಂದು ವರದಿಯಾಗಿದೆ.
KFCCಗೆ ದೂರು ನೀಡಲು ಸಿದ್ಧತೆ
ಆಡಿಯೋದಲ್ಲಿನ ಹೇಳಿಕೆಗಳಿಂದ ಅಸಮಾಧಾನಗೊಂಡಿರುವ ಜೈದ್ ಖಾನ್, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಧನ್ವೀರ್ ಗೌಡ ವಿರುದ್ಧ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಇಬ್ಬರು ಯುವ ನಟರ ನಡುವಿನ ಈ ವಿವಾದ ಗಾಂಧಿನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜೈದ್ ಖಾನ್ ದೂರು ಸಲ್ಲಿಸಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಕುರಿತು ಇಬ್ಬರು ನಟರ ಅಧಿಕೃತ ಪ್ರತಿಕ್ರಿಯೆ ಲಭ್ಯವಾದ ಬಳಿಕ ವಿವಾದದ ಮುಂದಿನ ಬೆಳವಣಿಗೆ ಸ್ಪಷ್ಟವಾಗಲಿದೆ.
