Sri Lankan president| ಅನುರ ಕುಮಾರ ದಿಸ್ಸನಾಯಕೆ ಪ್ರಮಾಣವಚನ ಸ್ವೀಕಾರ


ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸನಾಯಕೆ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ದಿಸ್ಸನಾಯಕೆ(56) ಅವರು ಕೊಲಂಬೊದ ಅಧ್ಯಕ್ಷೀಯ ಸಚಿವಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.

ಶನಿವಾರ ನಡೆದ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ಮೈತ್ರಿಕೂಟವಾದ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ನಾಯಕ ದಿಸ್ಸನಾಯಕೆ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (ಎಸ್‌ಜೆಬಿ)ದ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.

ದೇಶದ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದುಹಾಕುವ ಜವಾಬ್ದಾರಿ ಅವರ ಮೇಲಿದೆ.

Read More
Next Story