ಕೆನಡಾದಲ್ಲಿ ಕನ್ನಡಿಗ ಟೆಕ್ಕಿ ಹತ್ಯೆ: ಟೊರೆಂಟೊ ಪೊಲೀಸರಿಂದ ಆರೋಪಿ ಭಾವಚಿತ್ರ ಬಿಡುಗಡೆ
x

19 ವರ್ಷದ ಇಷಯಾ ಥಾಮಸ್ ಬಡ್ಗೇರ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಆತನ ಭಾವಚಿತ್ರವನ್ನೊಳಗೊಂಡ 'ವಾಂಟೆಡ್' ಪೋಸ್ಟರ್ ಅನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕೆನಡಾದಲ್ಲಿ ಕನ್ನಡಿಗ ಟೆಕ್ಕಿ ಹತ್ಯೆ: ಟೊರೆಂಟೊ ಪೊಲೀಸರಿಂದ ಆರೋಪಿ ಭಾವಚಿತ್ರ ಬಿಡುಗಡೆ

ಪೊಲೀಸರು ಬಿಡುಗಡೆ ಮಾಡಿರುಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಆತನ 'ವಾಂಟೆಡ್' ಪೋಸ್ಟರ್ ಅನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.


Click the Play button to hear this message in audio format

ಕೆನಡಾದ ಟೊರೆಂಟೊ ನಗರದಲ್ಲಿ ಕನ್ನಡಿಗ ಸಾಫ್ಟ್‌ವೇರ್ ಎಂಜಿನಿಯರ್ ಚಂದನ್ ಕುಮಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಅಲ್ಲಿನ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮೂಲದ ಚಂದನ್ ಕುಮಾರ್, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ವಾಸವಾಗಿದ್ದರು. ಅವರು ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದಲ್ಲದೆ, ಅಲ್ಲಿನ ಸ್ಥಳೀಯ ಕನ್ನಡ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜನಪ್ರಿಯರಾಗಿದ್ದರು.

ಫೆಬ್ರವರಿ 7ರಂದು ಕೆನಡಾದ ವುಡ್ ಬೈನ್ ಶಾಪಿಂಗ್ ಮಾಲ್​ನ ಪಾರ್ಕಿಂಗ್​ನಲ್ಲಿ ಮಧ್ಯಾಹ್ನ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಕಾರಲ್ಲಿದ್ದ ಚಂದನ್ ಕುಮಾರ್ ಅವರ ಮೇಲೂ ಗುಂಡು ಹಾರಿಸಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿಯೇ ಮೃತಪಟ್ಟಿದ್ದರು. ಈ ಭೀಕರ ಘಟನೆಯ ತನಿಖೆ ಕೈಗೆತ್ತಿಕೊಂಡಿರುವ ಟೊರೆಂಟೊ ಪೊಲೀಸರು ಇದೀಗ ಪತ್ರಿಕಾಗೋಷ್ಠಿ ನಡೆಸಿ ಕೊಲೆ ಆರೋಪಿಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪೊಲೀಸರು ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, 19 ವರ್ಷದ ಇಷಯಾ ಥಾಮಸ್ ಬಡ್ಗೇರ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಆತನ ಭಾವಚಿತ್ರವನ್ನೊಳಗೊಂಡ 'ವಾಂಟೆಡ್' ಪೋಸ್ಟರ್ ಅನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಸ್ತುತ ತಲೆಮರೆಸಿಕೊಂಡಿರುವ ಈ ಹಂತಕನಿಗಾಗಿ ಕೆನಡಾ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ ?

ಕೆನಡಾದಲ್ಲಿ ವಾಸವಾಗಿದ್ದ ಚಂದನ್‌ ಕುಮಾರ್‌(37) ಅಪರಿಚಿತ ದುಷ್ಕರ್ಮಿಗಳು ಗುಂಡೇಟಿಗೆ (ಫೆ. 8) ರಂದು ಬಲಿಯಾಗಿದ್ದರು. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹತ್ತಿರದಿಂದ ಹಲವು ಬಾರಿ ಗುಂಡು ಹಾರಿಸಲಾಗಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದ ಅವರು, ಎಲ್ ಆ್ಯಂಡ್​ ಟಿ (L&T) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆನಡಾದ ವುಡ್‌ಬೈನ್ ಮಾಲ್ ಬಳಿ ಇದ್ದ ವೇಳೆ ಗುಂಡಿನ ದಾಳಿ ನಡೆದಿತ್ತು.

ವೈಯಕ್ತಿಕ ದ್ವೇಷವೋ, ದರೋಡೆ ಪ್ರಯತ್ನವೋ?

ಲಭ್ಯ ಮಾಹಿತಿಯ ಪ್ರಕಾರ, ಚಂದನ್ ಮಾಲ್ ಸಮೀಪ ಕಾರಿನಲ್ಲಿ ಸಾಗುತ್ತಿದ್ದಾಗ ಏಕಾಏಕಿ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ಸುರಿಮಳೆಗೈದಿದ್ದರು. ಗುಂಡಿನ ದಾಳಿಯ ತೀವ್ರತೆಯಿಂದ ಚಂದನ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದರು ಎಂದು ಹೇಳಲಾಗಿತ್ತು. ದಾಳಿಯ ಹಿಂದೆ ವೈಯಕ್ತಿಕ ದ್ವೇಷವೋ, ದರೋಡೆ ಪ್ರಯತ್ನವೋ ಅಥವಾ ಬೇರೆ ಕಾರಣವೋ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Read More
Next Story