
ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ; ಬಾಂಗ್ಲಾದೇಶ ಸರ್ಕಾರಕ್ಕೆ ಆರ್‌ಎಸ್‌ಎಸ್ ಮನವಿ
ಹಿಂದೂಗಳ ಮೇಲಿನ ದೌರ್ಜನ್ಯ ಕೊನೆಗೊಳಿಸಲು ಇಸ್ಕಾನ್ ಸಂತ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಬಿಡುಗಡೆ ಮಾಡಲು ಬಾಂಗ್ಲಾದೇಶಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.
ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಕ್ಷಣ ನಿಲ್ಲಿಸುವಂತೆ ಮತ್ತು ಇಸ್ಕಾನ್ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಜೈಲಿನಿಂದ ತಕ್ಷಣ ಬಿಡುಗಡೆ ಮಾಡುವಂತೆ ಬಾಂಗ್ಲಾದೇಶದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶನಿವಾರ (ನವೆಂಬರ್ 30ರಂದು) ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದೆ.
ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ನಿಲ್ಲಿಸಲು ಭಾರತ ಸರ್ಕಾರವು ತನ್ನ ಪ್ರಯತ್ನಗಳನ್ನು ಮುಂದುವರಿಸಬೇಕು. ಅದೇ ರೀತಿ ಬಾಂಗ್ಲಾದೇಶವೂ ಸಾಧ್ಯವಾದಷ್ಟೂ ಬೇಗ ಜಾಗತಿಕ ಅಭಿಪ್ರಾಯಗಳನ್ನು ನಿರ್ಮಿಸಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.
"ಬಾಂಗ್ಲಾದೇಶದಲ್ಲಿ ಹಿಂದೂಗಳು, ಮಹಿಳೆಯರು ಮತ್ತು ಇತರ ಎಲ್ಲಾ ಅಲ್ಪಸಂಖ್ಯಾತರ ಮೇಲೆ ಇಸ್ಲಾಮಿಕ್ ಮೂಲಭೂತವಾದಿಗಳು ದಾಳಿ ನಡೆಸುತ್ತಿದ್ದಾರೆ. ದಾಳಿಗಳು, ಕೊಲೆಗಳು, ಲೂಟಿ, ಅಗ್ನಿಸ್ಪರ್ಶ ಮತ್ತು ಅಮಾನವೀಯ ದೌರ್ಜನ್ಯಗಳು ಅತ್ಯಂತ ಆತಂಕಕಾರಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಇದನ್ನು ಖಂಡಿಸುತ್ತದೆ" ಎಂದು ಅವರು ಹೇಳಿದ್ದಾರೆ. .
ದುಷ್ಕೃತ್ಯಗಳನ್ನು ತಡೆಯುವ ಬದಲು ಬಾಂಗ್ಲಾದೇಶ ಸರ್ಕಾರ ಮತ್ತು ಇತರ ಸಂಸ್ಥೆಗಳು ಕೇವಲ ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಹೊಸಬಾಳೆ ಖಂಡಿಸಿದರು.
ಸಂತರನ್ನು ಜೈಲಿಗೆ ಕಳುಹಿಸುವುದು ಅನ್ಯಾಯ
ಬಾಂಗ್ಲಾದೇಶದ ಹಿಂದೂಗಳು ಅಸಾಹಯಕತೆಯಿಂದ ಆತ್ಮರಕ್ಷಣೆಗಾಗಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಎತ್ತಿದ ಧ್ವನಿಯನ್ನು ನಿಗ್ರಹಿಸಲಾಗುತ್ತಿದೆ. ಹಿಂದೂಗಳ ವಿರುದ್ಧ ಅನ್ಯಾಯ ಮತ್ತು ದೌರ್ಜನ್ಯಗಳ ಹೊಸ ಹಂತವು ಹೊರಹೊಮ್ಮುತ್ತಿದೆ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ .
ಶಾಂತಿಯುತ ಪ್ರತಿಭಟನೆಗಳನ್ನು ನಡೆಸುತ್ತಿರುವ ಹಿಂದೂಗಳ ನೇತೃತ್ವ ವಹಿಸಿರುವ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಜೈಲಿಗೆ ಕಳುಹಿಸುವುದು ಬಾಂಗ್ಲಾದೇಶ ಸರ್ಕಾರ ಮಾಡಿರುವ ಅನ್ಯಾಯ" ಎಂದು ಅವರು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ಶ್ರೀ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಬಾಂಗ್ಲಾದೇಶ ಸರ್ಕಾರಕ್ಕೆ ಮನವಿ ಮಾಡುತ್ತದೆ" ಎಂದು ಹೊಸಬಾಳೆ ಹೇಳಿದ್ದಾರೆ .
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ನಿಲ್ಲಿಸುವ ಪ್ರಯತ್ನಗಳನ್ನು ಮುಂದುವರಿಸುವಂತೆ ಮತ್ತು ತನ್ನ ಬೆಂಬಲದಲ್ಲಿ ಜಾಗತಿಕ ಅಭಿಪ್ರಾಯವನ್ನು ನಿರ್ಮಿಸಲು ಸಾಧ್ಯವಾದಷ್ಟು ಬೇಗ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರ್‌ಎಸ್‌ಎಸ್ ಭಾರತ ಸರ್ಕಾರಕ್ಕೆ ಮನವಿ ಮಾಡುತ್ತದೆ" ಎಂದೂ ಹೊಸ ಬಾಳೆ ಅವರು ಹೇಳಿದ್ದಾರೆ.
ಈ ನಿರ್ಣಾಯಕ ಸಮಯದಲ್ಲಿ ಭಾರತ ಮತ್ತು ಜಾಗತಿಕ ಸಮುದಾಯ ಮತ್ತು ಸಂಸ್ಥೆಗಳು ಬಾಂಗ್ಲಾದೇಶದ ಸಂತ್ರಸ್ತರೊಂದಿಗೆ ನಿಲ್ಲಬೇಕು. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಕ್ಷಣವೇ ನಿಲ್ಲಿಸಲು ಆಯಾ ಸರ್ಕಾರಗಳು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕೆಂದು ಒತ್ತಾಯಿಸಬೇಕು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.