Operation Sindoor: ಬೆದರಿದ ಪಾಕಿಸ್ತಾನ, ಸೇನೆ ಹಿಂದೆಗೆದುಕೊಳ್ಳುವ ಮಾತನಾಡಿದ ಪಾಕಿಸ್ತಾನ
x

Operation Sindoor: ಬೆದರಿದ ಪಾಕಿಸ್ತಾನ, ಸೇನೆ ಹಿಂದೆಗೆದುಕೊಳ್ಳುವ ಮಾತನಾಡಿದ ಪಾಕಿಸ್ತಾನ

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌, ಈ ದಾಳಿ ಮುಂದುವರಿಸದೇ ಭಾರತವು ತನ್ನ ಕಾರ್ಯಾಚರಣೆಯನ್ನು ಹಿಂದಕ್ಕೆ ತೆಗೆದುಕೊಂಡರೆ, ಪಾಕಿಸ್ತಾನವು ಶಾಂತಿಯುತ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.


ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮರ ಸ್ಥಿತಿಯ ನಡುವೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌ ಸೇನೆ ಹಿಂದೆಗೆದುಕೊಳ್ಳುವ ಮಾತನಾಡಿದ್ದಾರೆ. ಭಾರತ ಸೇನೆಯನ್ನು ಹಿಂದಕ್ಕೆ ತೆಗೆದುಕೊಂಡರೆ ಸಂಘರ್ಷ ಕೊನೆಗೊಳಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಈ ಮೂಲಕ ಭಾರತ ನಡೆಸಿದ ದಾಳಿಗೆ ಬೆದರಿದೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ದಾಳಿಗೆ ಪ್ರತೀಕಾರವಾಗಿ ಭಾರತವು 'ಆಪರೇಷನ್‌ ಸಿಂಧೂರ್‌' ಎಂಬ ಕಾರ್ಯಾಚರಣೆಯಡಿ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ 9 ಭಯೋತ್ಪಾದಕರ ತಾಣಗಳ ಮೇಲೆ ನಿಖರ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ದಾಳಿಯ ಬಳಿಕ ಮಾತನಾಡಿದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌, ಈ ದಾಳಿ ಮುಂದುವರಿಸದೇ ಭಾರತವು ತನ್ನ ಕಾರ್ಯಾಚರಣೆಯನ್ನು ಹಿಂದಕ್ಕೆ ತೆಗೆದುಕೊಂಡರೆ, ಪಾಕಿಸ್ತಾನವು ಶಾಂತಿಯುತ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ. "ನಾವು ಯುದ್ಧವನ್ನು ಬಯಸುವುದಿಲ್ಲ, ಆದರೆ ಭಾರತದ ಕ್ರಮಗಳಿಗೆ ಸೂಕ್ತ ಉತ್ತರ ನೀಡುವ ಹಕ್ಕನ್ನು ನಾವು ಹೊಂದಿದ್ದೇವೆ," ಎಂದು ಅವರು ಹೇಳಿದ್ದಾರೆ.

ವಿಮಾನ ಯಾನಕ್ಕೆ ಅಡಚಣೆ

ಈ ಬೆಳವಣಿಗೆಯಿಂದಾಗಿ ಉಭಯ ದೇಶಗಳ ನಡುವಿನ ಗಡಿ ಪ್ರದೇಶದಲ್ಲಿ ಒತ್ತಡ ಹೆಚ್ಚಾಗಿದ್ದು, ವಿಮಾನಯಾನ ಕಾರ್ಯಾಚರಣೆಗಳ ಮೇಲೂ ಪರಿಣಾಮ ಬೀರಿದೆ. ಭಾರತದ ಕೆಲವು ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯು ಅಡಚಣೆಗೊಳಗಾಗಿದೆ.

ಅಂತಾರಾಷ್ಟ್ರೀಯ ಸಮುದಾಯವೂ ಈ ಒತ್ತಡವನ್ನು ಗಂಭೀರವಾಗಿ ಪರಿಗಣಿಸಿದ್ದು, ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಘ್ಚಿ, ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ "ಸಂಯಮ" ವಹಿಸುವಂತೆ ಕರೆ ನೀಡಿದ್ದಾರೆ.

Read More
Next Story