Open the Strait of Hormuz: US President Donald Trump issues stern warning to Iran
x

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Iran-Israer War| ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಿ: ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟ್ಟುನಿಟ್ಟಿನ ಎಚ್ಚರಿಕೆ

ಇರಾನ್ ಬೆಂಬಲಿತ ದಾಳಿಗಳಲ್ಲಿ ಹತ್ಯೆಯಾದ ಅಮೆರಿಕದ ಸೈನಿಕರು ಮತ್ತು ಅಮಾಯಕ ನಾಗರಿಕರ ಸಾವಿಗೆ ಪ್ರತೀಕಾರವಾಗಿ ಈ ಕಠಿಣ ಹೆಜ್ಜೆ ಇಡಲಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.


Click the Play button to hear this message in audio format

ಜಾಗತಿಕ ವ್ಯಾಪಾರ ವಹಿವಾಟಿಗೆ ನಿರ್ಣಾಯಕವಾಗಿರುವ ಹೊರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸದಿದ್ದರೆ ಇರಾನ್‌ನ ತೈಲ ಘಟಕಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಭೀಕರ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಆಡಳಿತವು ಈ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಗುಡುಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ 'ಟ್ರುತ್‌' ಖಾತೆಯಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಇರಾನ್‌ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕವು ಅಲ್ಲಿನ ಆಡಳಿತದೊಂದಿಗೆ ಚರ್ಚೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಈ ಮಾತುಕತೆ ವಿಫಲವಾಗಿ ಒಪ್ಪಂದಕ್ಕೆ ಬರದಿದ್ದರೆ ಹಾಗೂ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸದಿದ್ದರೆ, ಇರಾನ್‌ನ ಪ್ರಮುಖ ಆರ್ಥಿಕ ಮೂಲವಾಗಿರುವ ತೈಲ ಘಟಕಗಳು, ವಿದ್ಯುತ್ ಉತ್ಪಾದನಾ ಘಟಕಗಳು ಸೇರಿದಂತೆ ಖಾರ್ಗ್ ದ್ವೀಪವನ್ನು ಸಂಪೂರ್ಣವಾಗಿ ಧ್ವಂಸಗೊಳಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರತೀಕಾರದ ಹೆಜ್ಜೆ ಮತ್ತು ಮಾತುಕತೆಯ ಗೊಂದಲ

ಇರಾನ್ ಬೆಂಬಲಿತ ದಾಳಿಗಳಲ್ಲಿ ಹತ್ಯೆಯಾದ ಅಮೆರಿಕದ ಸೈನಿಕರು ಮತ್ತು ಅಮಾಯಕ ನಾಗರಿಕರ ಸಾವಿಗೆ ಪ್ರತೀಕಾರವಾಗಿ ಈ ಕಠಿಣ ಹೆಜ್ಜೆ ಇಡಲಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ಒಂದೆಡೆ ಮಿಲಿಟರಿ ಕಾರ್ಯಾಚರಣೆ ಅಂತ್ಯಗೊಳಿಸುವ ಕುರಿತು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ಪ್ರಗತಿಯಲ್ಲಿದೆ ಎಂದು ಅಮೆರಿಕ ಅಧ್ಯಕ್ಷರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಮತ್ತೊಂದೆಡೆ ಅಮೆರಿಕದೊಂದಿಗೆ ತಾವು ಯಾವುದೇ ರೀತಿಯ ನೇರ ಮಾತುಕತೆಯಲ್ಲಿ ತೊಡಗಿಲ್ಲ ಎಂದು ಇರಾನ್ ನಾಯಕರು ಸ್ಪಷ್ಟಪಡಿಸಿದ್ದು, ಈ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ತೀವ್ರ ಗೊಂದಲ ಮತ್ತು ಆತಂಕ ಮನೆಮಾಡಿದೆ.

Read More
Next Story