
ಸಾಂದರ್ಭಿಕ ಚಿತ್ರ
Job News | ಡಿಸಿಸಿ ಬ್ಯಾಂಕ್ ನೇಮಕಾತಿ; ಪದವಿ, ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ? ಇಂದೇ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುವುದು.
ಪದವಿ, ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಲಿಮಿಟೆಡ್ (ಬಿಡಿಸಿಬಿ) ಸಿಹಿ ಸುದ್ದಿ ನೀಡಿದೆ. ಬ್ಯಾಂಕ್‌ನಲ್ಲಿ ಖಾಲಿ ಇರುವ ಎಫ್‌ಡಿಎ, ಎಸ್‌ಡಿಎ, ಜೂನಿಯರ್ ಅಸಿಸ್ಟೆಂಟ್ ಹಾಗೂ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಮೇ 6, ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕರ ಹುದ್ದಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,425 ರೂ. ವೇತನ ನಿಗದಿಪಡಿಸಲಾಗಿದೆ. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಾಲಾ ಮಂಡಳಿಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಮಾಸಿಕ 34,100 ರೂ. ವೇತನ ನಿಗದಿಪಡಿಸಲಾಗಿದೆ. ಕಿರಿಯ ಸಹಾಯಕರು ಹಾಗೂ ವಾಹನ ಚಾಲಕರು ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 31,775 ರೂ. ವೇತನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರ್ಣಗೊಳಿಸಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಸರ್ಕಾರದ ನಿಯಮದಂತೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ, ಮಹಿಳೆಯರು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,000 ರೂ. ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಹಾಗೂ ಮಾಜಿ ಸೈನಿಕರಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ ಮತ್ತು ಪರೀಕ್ಷಾ ಮಾದರಿ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುವುದು. ಸಾಮಾನ್ಯ ಕನ್ನಡ (50), ಸಾಮಾನ್ಯ ಇಂಗ್ಲಿಷ್ (25), ಸಾಮಾನ್ಯ ಜ್ಞಾನ (25), ಸಹಕಾರ ವಿಷಯ (50), ಸಂವಿಧಾನ (25) ಮತ್ತು ಬ್ಯಾಂಕಿಂಗ್ ವಿಷಯಗಳು (25) ಅಂಕ ನಿಗದಿಪಡಿಸಲಾಗಿದೆ. ಚಾಲಕ ಮತ್ತು ಕಿರಿಯ ಸಹಾಯಕರ ಪರೀಕ್ಷೆಗೆ 100 ಅಂಕಗಳಿಗೆ ಪರೀಕ್ಷೆ ಪೈಕಿ ಸಾಮಾನ್ಯ ಕನ್ನಡ (50) ಮತ್ತು ಸಾಮಾನ್ಯ ಇಂಗ್ಲಿಷ್ (50) ಅಂಕಗಳನ್ನು ನಿಗದಿಪಡಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
ಬಳ್ಳಾರಿ ಡಿಸಿಸಿಬಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಪೂರ್ತಿ ಓದಿ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಲಿಂಕ್ ಮೂಲಕ ಅಗತ್ಯ ದಾಖಲೆಗಳನ್ನು (ಫೋಟೋ, ಸಹಿ, ಅಂಕಪಟ್ಟಿ) ಅಪ್‌ಲೋಡ್ ಮಾಡಬೇಕು. ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ. ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

