Job News | Chamarajanagar District Court Recruitment: Applications invited for 25 posts of jawan, typist
x

ಸಾಂದರ್ಭಿಕ ಚಿತ್ರ

Job News | ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 25 ಜವಾನ, ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು 1:10 ರಂತೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿ, ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.


Click the Play button to hear this message in audio format

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿರುವ 25 ಜವಾನ ಹಾಗೂ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 13 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು 25 ಪೋಸ್ಟ್‌ಗಳಿದ್ದು, ಅವುಗಳಲ್ಲಿ ಸ್ಟೆನೋಗ್ರಾಫರ್ 2, ಟೈಪಿಸ್ಟ್ 6, ಟೈಪಿಸ್ಟ್ ಮತ್ತು ಕಾಪಿಸ್ಟ್ 4 ಹಾಗೂ 13 ಜವಾನ ಹುದ್ದೆಗಳನ್ನು ವಿಂಗಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ, 12ನೇ ತರಗತಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಎಂದು ಹೇಳಿದ್ದಾರೆ.

ವೇತನ ಎಷ್ಟು ?

ಸ್ಟೆನೋಗ್ರಾಫರ್ ಹುದ್ದೆಗೆ 44,425 ರೂ. ಟೈಪಿಸ್ಟ್ ಹುದ್ದೆಗೆ 34,100 ರೂ. ಟೈಪಿಸ್ಟ್ ಮತ್ತು ಕಾಪಿಸ್ಟ್ ಹಾಗೂ ಜವಾನರ ಹುದ್ದೆಗೆ 27,000 ರೂ. ನಿಗದಿಪಡಿಸಲಾಗಿದೆ. ಇದರ ಜತೆಗೆ ಮನೆ ಬಾಡಿಗೆ ಸೇರಿದಂತೆ ವಿಶೇಷ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ

ಚಾಮರಾಜನಗರ ಇ-ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಏ. 13ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷಗಳು ಪೂರ್ಣಗೊಳಸಿರಬೇಕು ಮತ್ತು ಗರಿಷ್ಠ 35 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲಚೇತನರು ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ಪರೀಕ್ಷಾ ಶುಲ್ಕ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇನತ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು 1:10 ರಂತೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿ, ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ

* ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

* ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದಾದರೂ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

* ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಜವಾನ, ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

* ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ, ಅಗತ್ಯ ಪ್ರಮಾಣಪತ್ರಗಳು ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

* ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

* ಕೊನೆಯದಾಗಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್‌ಮಿಟ್‌ ಬಟನ್ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆಯನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story