Have you passed 10th, PUC? Apply today for various posts in the District Court
x

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ

10th, ಪಿಯುಸಿ ಉತ್ತೀರ್ಣರಾಗಿದ್ದೀರಾ ? ಜಿಲ್ಲಾ ಕೋರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ವಿನಾಯಿತಿ ಇರಲಿದೆ.


Click the Play button to hear this message in audio format

ರಾಜ್ಯ ಸರ್ಕಾರಿ ಕೆಲಸದ ಹುಡುಕಾಟದಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದಿದೆ. ಚಿಕ್ಕಮಗಳೂರು ಇ-ಕೋರ್ಟ್ ಜೂ. 2026ರ ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ವಿವಿಧ 61 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಜು. 28ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳು ಮತ್ತು ವಿದ್ಯಾರ್ಹತೆ

ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 61 ಹುದ್ದೆಗಳು ಖಾಲಿ ಇವೆ. ಗುಮಾಸ್ತ 42 ಹುದ್ದೆಗಳಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ (ಎಸ್‌ಎಸ್‌ಎಲ್‌ಸಿ) ತೇರ್ಗಡೆಯಾಗಿರಬೇಕು. ಸ್ಟೆನೋಗ್ರಾಫರ್ಸ್ ಗ್ರೇಡ್-III ಐದು ಹಾಗೂ ಆರು ಬೆರಳಚ್ಚುಗಾರರ ಹುದ್ದೆಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಅತ್ಯುತ್ತಮ ಸಂಬಳ ನೀಡಲಾಗುವುದು.

ಗುಮಾಸ್ತ ಹುದ್ದೆಗೆ ಆರಂಭಿಕ ವೇತನ 27 ಸಾವಿರ ರೂ. ಪ್ರೊಸೆಸ್ ಸರ್ವರ್ ಹುದ್ದೆಗೆ 31,775 ರೂ. ಟೈಪಿಸ್ಟ್ ಹುದ್ದೆಗೆ 34,100 ರೂ. ಸ್ಟೆನೋಗ್ರಾಫರ್ಸ್ ಗ್ರೇಡ್-III ಹುದ್ದೆಗೆ 44,425 ರೂ. ನಿಗದಿಪಡಿಸಲಾಗಿದ್ದು, ವೇತನದ ಜೊತೆಗೆ ಮತ್ತಷ್ಟು ಭತ್ಯೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಯೋಮಿತಿ ಮತ್ತು ಸಡಿಲಿಕೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ವಿನಾಯಿತಿ ಇರಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕದ ವಿವರ

ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 300 ರೂ. ಹಿಂದುಳಿದ ವರ್ಗದ ಅಭ್ಯರ್ಥಿಗಳಾದ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 150 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆನ್‌ಲೈನ್ ಮೂಲಕ ಪಾವತಿ ಮಾಡಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕೌಶಲ್ಯ ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಉತ್ತೀರ್ಣರಾದವರನ್ನು ಸಂದರ್ಶನಕ್ಕೆ ಆಹ್ವಾನಿಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು. ಆನ್‌ಲೈನ್ ಅರ್ಜಿ ಭರ್ತಿ ಮಾಡುವ ಮುನ್ನ ನಿಮ್ಮ ಚಾಲ್ತಿಯಲ್ಲಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ವಿದ್ಯಾರ್ಹತೆಯ ದಾಖಲೆಗಳು ಮತ್ತು ಇತ್ತೀಚಿನ ಫೋಟೋವನ್ನು ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ. ಅಗತ್ಯವಿರುವ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ. ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ. ಕೊನೆಯದಾಗಿ 'ಸಲ್ಲಿಸು' ಬಟನ್ ಒತ್ತುವ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ತೆಗೆದುಕೊಳ್ಳಿ. ಅರ್ಜಿ ಸಲ್ಲಿಸಲು ಕೊನೆಯ ಜು.28 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story