
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ
Job News | ಆರೋಗ್ಯ ಇಲಾಖೆಯಲ್ಲಿ ತಜ್ಞ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, 1.30 ಲಕ್ಷ ರೂ. ಸಂಬಳ
ಅರ್ಜಿ ಸಲ್ಲಿಸಿ ಆಯ್ಕೆಯಾದ ವೈದ್ಯರು ಮತ್ತು ಮಕ್ಕಳ ವೈದ್ಯರಿಗೆ ಪ್ರತಿ ತಿಂಗಳು 1.30 ಲಕ್ಷ ರೂ. ಹಾಗೂ ತುರ್ತು ವೈದ್ಯಕೀಯ ಅಧಿಕಾರಿಗೆ 60 ಸಾವಿರ ರೂ. ವೇತನ ನಿಗದಿಪಡಿಸಲಾಗಿದ್ದು, ವಿಶೇಷ ಭತ್ಯೆಗಳು ದೊರೆಯಲಿವೆ.
ಉತ್ತರ ಕನ್ನಡ ಜಿಲ್ಲೆಯ ನಿರುದ್ಯೋಗಿ ವೈದ್ಯಕೀಯ ವೃತ್ತಿಪರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS) ಖಾಲಿ ಇರುವ 12 ತಜ್ಞ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವವರು ಆಫ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಧಿಸೂಚನೆ ಮೂಲಕ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗೆ ಅನುಗುಣವಾಗಿ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವೈದ್ಯರು, ಮಕ್ಕಳ ವೈದ್ಯರು 4 ಹುದ್ದೆಗಳು, ತುರ್ತು ವೈದ್ಯಕೀಯ ಅಧಿಕಾರಿ 8 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.
ವೇತನ
ಅರ್ಜಿ ಸಲ್ಲಿಸಿ ಆಯ್ಕೆಯಾದ ವೈದ್ಯರು ಮತ್ತು ಮಕ್ಕಳ ವೈದ್ಯರಿಗೆ ಪ್ರತಿ ತಿಂಗಳು 1.30 ಲಕ್ಷ ರೂ. ತುರ್ತು ವೈದ್ಯಕೀಯ ಅಧಿಕಾರಿಗೆ 60 ಸಾವಿರ ರೂ. ನಿಗದಿಪಡಿಸಲಾಗಿದ್ದು, ವಿಶೇಷ ಭತ್ಯೆಗಳು ದೊರೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ತುರ್ತು ವೈದ್ಯಕೀಯ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ
ಏ.1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳು, ಐಡಿ ಪುರಾವೆ, ವಯಸ್ಸಿನ ಪ್ರಮಾಣಪತ್ರ ಮತ್ತು ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕಚೇರಿ, ಕಾರವಾರ, ಉತ್ತರ ಕನ್ನಡ ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಲು ಸೂಚಿಸಿದೆ.
ವಯೋಮಿತಿ ವಿನಾಯಿತಿ ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಕಾರವಾರದ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

