IDBI Bank Recruitment: Applications invited for 200 Assistant Manager posts; Salary up to 80 thousand!
x

ಸಾಂದರ್ಭಿಕ ಚಿತ್ರ

IDBI Bank Recruitment: 200 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 80 ಸಾವಿರವರೆಗೆ ವೇತನ!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಸಾಕ್ಷರತೆ ಅತ್ಯಗತ್ಯ.


Click the Play button to hear this message in audio format

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಐಡಿಬಿಐ (IDBI) ಬ್ಯಾಂಕ್ ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿಗಾಗಿ ಸಹಾಯಕ ವ್ಯವಸ್ಥಾಪಕ - ಗ್ರೇಡ್ 'ಎ' ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 200 ಹುದ್ದೆಗಳಿದ್ದು, ಸಾಮಾನ್ಯ ವಿಭಾಗಕ್ಕೆ 81, ಹಿಂದುಳಿದ ವರ್ಗಗಳಿಗೆ 54, ಪರಿಶಿಷ್ಟ ಜಾತಿಗೆ 30, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 15 ಹುದ್ದೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ 20 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಅರ್ಜಿ ಸಲ್ಲಿಸಲು ಮಾ.12 ಕೊನೆಯ ದಿನಾಂಕವಾಗಿದೆ.

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಸಾಕ್ಷರತೆ ಅತ್ಯಗತ್ಯ. ಯಾವುದೇ ಸಾರ್ವಜನಿಕ, ಖಾಸಗಿ , ಸಹಕಾರಿ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಅಧಿಕಾರಿ ಮಟ್ಟದಲ್ಲಿ ಕೆಲಸ ಮಾಡಿದ ಕಡ್ಡಾಯ ಅನುಭವವಿರಬೇಕು. ಶಾಖೆ ಬ್ಯಾಂಕಿಂಗ್, ಕ್ರೆಡಿಟ್, ಮಾರಾಟ ಮತ್ತು ಉತ್ಪನ್ನಗಳ ಬಗ್ಗೆ ಜ್ಞಾನವಿರಬೇಕು. ಸಂದರ್ಶನದ ಸಮಯದಲ್ಲಿ ಕಂಪನಿಯ ಲೆಟರ್‌ಹೆಡ್‌ನಲ್ಲಿ ಮಾನವ ಸಂಪನ್ಮೂಲ ವಿಭಾಗದಿಂದ ಸಹಿ ಮಾಡಲಾದ ಅನುಭವ ಪ್ರಮಾಣಪತ್ರವನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವೇತನ ಶ್ರೇಣಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 48,480 ರೂ. ದೊರೆಯಲಿದ್ದು, ಭತ್ಯೆಗಳು ಸೇರಿದಂತೆ ಮೆಟ್ರೋ ನಗರಗಳಲ್ಲಿ ಮಾಸಿಕ ಸುಮಾರು 65,000 ರೂ. ರಿಂದ 80,000 ರೂ. ವರೆಗೆ ವೇತನ ಸಿಗಲಿದೆ. 2026 ಮಾ.1 ರ ಅನ್ವಯ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಏಪ್ರಿಲ್ 12ರಂದು ಆನ್‌ಲೈನ್ ಪರೀಕ್ಷೆ ನಡೆಸಲಾಗುವುದು. ಅನುಭವ ಪ್ರಮಾಣಪತ್ರಗಳ ಪರಿಶೀಲನೆ ನಡೆಸಿ, ವೈಯಕ್ತಿಕ ಸಂದರ್ಶನದಲ್ಲಿ ಬ್ಯಾಂಕಿಂಗ್ ಜ್ಞಾನ ಮತ್ತು ವೃತ್ತಿಪರ ಸಾಮರ್ಥ್ಯದ ಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,050 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆಸಕ್ತರು ಐಡಿಬಿಐ ಬ್ಯಾಂಕಿನ ಅಧಿಕೃತ ವೃತ್ತಿ ಪುಟಕ್ಕೆ (Career Page) ಭೇಟಿ ನೀಡಿ, ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಸಂದರ್ಶನದ ಸಮಯದಲ್ಲಿ ನಿಗದಿತ ನಮೂನೆಯಲ್ಲಿ ಅನುಭವ ಪ್ರಮಾಣಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story