IOCL Barauni Refinery Recruitment: Applications invited for 223 apprentice posts without examination
x
ಸಾಂದರ್ಭಿಕ ಚಿತ್ರ

IOCL ರಿಫೈನರಿ ನೇಮಕಾತಿ: 223 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಕೋರ್ಸ್‌ಗಳಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಅಂತಿಮ ಆಯ್ಕೆ ನಡೆಯಲಿದೆ.


Click the Play button to hear this message in audio format

ಬಿಹಾರದ ಬರೌನಿಯಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ರಿಫೈನರಿ ಘಟಕದಲ್ಲಿ 2026ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅಧಿಸೂಚನೆ ಹೊರ ಬಿದ್ದಿದೆ. ಐಟಿಐ, ಡಿಪ್ಲೊಮಾ ಮತ್ತು ಪದವಿ ಗಳಿಸಿದ ಅಭ್ಯರ್ಥಿಗಳು ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 223 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಟೆಂಡೆಂಟ್ ಆಪರೇಟರ್ ಕೆಮಿಕಲ್ ಪ್ಲಾಂಟ್‌ನಲ್ಲಿ 152 ಹುದ್ದೆಗಳು, ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್ ಹಾಗೂ ಬಾಯ್ಲರ್) 45 ಹುದ್ದೆಗಳು, ಟೆಕ್ನಿಷಿಯನ್ ಅಪ್ರೆಂಟಿಸ್ (ಇನ್ಸ್ಟ್ರುಮೆಂಟೇಶನ್) 17 ಹುದ್ದೆಗಳು ಹಾಗೂ ಡೇಟಾ ಎಂಟ್ರಿ ಆಪರೇಟರ್ ಹಾಗೂ ಅಕೌಂಟೆಂಟ್ 9 ಹುದ್ದೆಗಳಿಗೆ ಅಪ್ರೆಂಟಿಸ್‌ಗಳ ನೇಮಕ ನಡೆಯಲಿದೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಬಿಎಸ್ಸಿ, ಬಿಕಾಂ, ಐಟಿಐ ಅಥವಾ ಎಂಜಿನಿಯರಿಂಗ್ ಡಿಪ್ಲೊಮಾವನ್ನು ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತಿರ್ಣರಾಗಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶೇ. 45 ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. 12ನೇ ತರಗತಿ ಪಾಸಾದವರು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ

ಜನವರಿ 31ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಕೋರ್ಸ್‌ಗಳಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಅಂತಿಮ ಆಯ್ಕೆ ನಡೆಯಲಿದೆ.

ಸ್ಟೈಫಂಡ್ ಮತ್ತು ಸೌಲಭ್ಯಗಳು

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆಯನ್ವಯ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಇದರೊಂದಿಗೆ ಉಚಿತ ಸುರಕ್ಷತಾ ಪರಿಕರಗಳಾದ ಹೆಲ್ಮೆಟ್, ಶೂ, ಅಪಘಾತ ವಿಮಾ ಸೌಲಭ್ಯಗಳು, ನಿಗದಿತ ರಜೆಗಳ ಸೌಲಭ್ಯ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದ್ದು, ಎರಡು ಹಂತಗಳಲ್ಲಿ ಪೂರ್ಣಗೊಳಿಸಬೇಕು.

ಹಂತ 1: ಮೊದಲಿಗೆ apprenticeshipindia.gov.in (NAPS) ಅಥವಾ nats.education.gov.in (NATS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಹಂತ 2: ನಂತರ IOCL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ 'ಬರೌನಿ ರಿಫೈನರಿ ಹೆಚ್ಚುವರಿ ಡೇಟಾ ಫಾರ್ಮ್' ಭರ್ತಿ ಮಾಡಬೇಕು.

ಅರ್ಜಿ ಸಲ್ಲಿಸಲು ಫೆ. 23 ಕೊನೆಯ ದಿನಾಂಕವಾಗಿದ್ದು, ಮಾ. 9ರಿಂದ 12 ರವರೆಗೆ ದಾಖಲೆ ಪರಿಶೀಲನೆ ನಡೆಯಲಿದ್ದು, ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

Read More
Next Story