
ಭಾರತೀಯ ರೈಲ್ವೆ
Job News| IRCTC ಯಲ್ಲಿ ಉದ್ಯೋಗಾವಕಾಶ: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ (Diploma), ಬಿ.ಇ (B.E), ಬಿ.ಟೆಕ್ (B.Tech) ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಖಾಲಿ ಇರುವ 2 ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ (IRCTC Recruitment 2026) ಹೊರಡಿಸಲಾಗಿದೆ. ಮ್ಯಾನೇಜರ್ (Manager), ಅಸಿಸ್ಟೆಂಟ್ ಮ್ಯಾನೇಜರ್ (Assistant Manager) ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್ (Deputy General Manager) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಏ. 9, ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ (Diploma), ಬಿ.ಇ (B.E), ಬಿ.ಟೆಕ್ (B.Tech) ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷಗಳನ್ನು ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ವೇತನ ಹಾಗೂ ಆಯ್ಕೆ ಪ್ರಕ್ರಿಯೆ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50 ಸಾವಿರ ರೂ. ಗಳಿಂದ 2 ಲಕ್ಷ ರೂ. ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ (Shortlist) ಮಾಡಿ, ನೇರ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IRCTC ಯ ಅಧಿಕೃತ ವೆಬ್‌ಸೈಟ್ (irctc.com) ಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ: GM (HR&CC), IRCTC Corporate office, 4th floor, Tower-D. World Trade Centre, New Delhi-110 029.
ಅಲ್ಲದೆ, ಅಭ್ಯರ್ಥಿಗಳು ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು (Soft copy) deputation@irctc.com ಇಮೇಲ್ ವಿಳಾಸಕ್ಕೂ ಕಳುಹಿಸಬಹುದಾಗಿದೆ.

