Job News | SSLC passed? Golden opportunity in the High Court!
x

ಕರ್ನಾಟಕ ಹೈಕೋರ್ಟ್‌

Job News | ಎಸ್‌ಎಸ್‌ಎಲ್‌ಸಿ ಪಾಸ್‌ ಆಗಿದೆಯೇ ? ಹೈಕೋರ್ಟ್‌ನಲ್ಲಿದೆ ಸುವರ್ಣಾವಕಾಶ!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ವಿನಾಯಿತಿ ನೀಡಲಾಗಿದೆ.


Click the Play button to hear this message in audio format

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗುಮಾಸ್ತ, ವಾಚ್‌ಮ್ಯಾನ್, ಸ್ವೀಪರ್ ಸೇರಿದಂತೆ ಒಟ್ಟು 101 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಮೇ 21 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳು ಮತ್ತು ವೇತನ

ನೇಮಕಾತಿ ಅಧಿಸೂಚನೆಯಲ್ಲಿ ಗುಮಾಸ್ತ, ವಾಚ್‌ಮ್ಯಾನ್‌, ಸ್ವೀಪರ್, ಸಹಾಯಕ ಬೈಂಡರ್ ಮತ್ತು ಧೋಬಿ ಹುದ್ದೆಗಳಿಗೆ ಆರಂಭಿಕ ವೇತನ 19,900 ರೂ. ಲಿಫ್ಟ್ ಅಟೆಂಡರ್ ಮತ್ತು ಟೈಲರ್‌ ಹುದ್ದೆಗೆ ಆರಂಭಿಕ 21,700 ರೂ. ನಿಗದಿಪಡಿಸಲಾಗಿದ್ದು, ಆರೋಗ್ಯ ಹಾಗೂ ಮನೆ ಭತ್ಯೆಯನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 10ನೇ ತರಗತಿ ಪರೀಕ್ಷೆಯನ್ನು ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್‌ ತಿಳಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಶೈಕ್ಷಣಿಕ ದಾಖಲೆಗಳು, ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ. ನಿಗದಿತ ಶುಲ್ಕವನ್ನು ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಾಗಿದ್ದು, ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನಾಂಕವಾಗಿದೆ ಎಂದು ಹೈಕೋರ್ಟ್‌ ತನ್ನ ಪ್ರಕಟಣೆಯಲ್ಲಿ ಸೂಚನೆ ನೀಡಿದೆ.

Read More
Next Story