
ಕರ್ನಾಟಕ ಹೈಕೋರ್ಟ್
Job News | ಪದವಿ ಪೂರೈಸಿದ್ದೀರಾ ? ಹೈಕೋರ್ಟ್‌ನಲ್ಲಿವೆ ವಿಪುಲ ಅವಕಾಶ, 1.42 ಲಕ್ಷ ರೂ. ವರೆಗೆ ವೇತನ!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ , ವಿಜ್ಞಾನ, ಕಲೆ, ವಾಣಿಜ್ಯ, ವ್ಯವಹಾರ ಆಡಳಿತ ಅಥವಾ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಪಡೆದಿರಬೇಕು.
ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಹೈಕೋರ್ಟ್‌ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 70 'ಸಹಾಯಕ ನ್ಯಾಯಾಲಯ ಕಾರ್ಯದರ್ಶಿ' ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನಾಂಕವಾಗಿದೆ.
ಒಟ್ಟು ಹುದ್ದೆಗಳೆಷ್ಟು ?
ಒಟ್ಟು 70 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 59 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭ್ಯರ್ಥಿಗಳಿಗೆ 11 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳನ್ನು ವಿಂಗಡಿಸಲಾಗಿದೆ.
ಅರ್ಹತೆ ಮತ್ತು ವೇತನ ಶ್ರೇಣಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ , ವಿಜ್ಞಾನ, ಕಲೆ, ವಾಣಿಜ್ಯ, ವ್ಯವಹಾರ ಆಡಳಿತ ಅಥವಾ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,900 ರೂ. ನಿಂದ 1,42,400 ರೂ. ವರೆಗೆ ಆಕರ್ಷಕ ವೇತನ ಶ್ರೇಣಿ ಇರಲಿದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದವರಿಗೆ 3 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ, ಪ್ರಾಥಮಿಕ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 250 ರೂ. ಶುಲ್ಕವಿರುತ್ತದೆ. ಮುಖ್ಯ ಪರೀಕ್ಷೆಗೆ ಆಯ್ಕೆಯಾದವರು ಪ್ರತ್ಯೇಕವಾಗಿ ಶುಲ್ಕ ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳಲು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
* ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
* ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
* ಕರ್ನಾಟಕ ಹೈಕೋರ್ಟ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ.
* ನಿಮ್ಮ ಇತ್ತೀಚಿನ ಭಾವಚಿತ್ರ, ಅಗತ್ಯ ಪ್ರಮಾಣಪತ್ರಗಳು ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
* ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
* ಕೊನೆಯದಾಗಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೇವ್ ಬಟನ್ ಕ್ಲಿಕ್ ಮಾಡಿ.
* ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳುವುದು ಅತ್ಯಂತ ಮುಖ್ಯ ಎಂದು ಹೈಕೋರ್ಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

