
ಸಾಂದರ್ಭಿಕ ಚಿತ್ರ
Job News|ಕಂದಾಯ ಇಲಾಖೆಯಲ್ಲಿ ನೇಮಕಾತಿ; ಉಪ ತಹಶೀಲ್ದಾರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ, ಬಿಇ, ಬಿ.ಟೆಕ್ ಅಥವಾ ಪಿಜಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ಸರ್ಕಾರಿ ಕೆಲಸದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಕಂದಾಯ ಇಲಾಖೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಐಟಿ ಸಿಬ್ಬಂದಿ, ಉಪ ತಹಶೀಲ್ದಾರ್ ಹಾಗೂ ಕಾನೂನು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ನಿರ್ವಹಿಸಲು ಆಸಕ್ತಿ ಇರುವವರು ಈ ಅವಕಾಶ ಬಳಸಿಕೊಳ್ಳಬಹುದಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ. 4 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ, ಸಂಬಳ
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಶಿರಸ್ತೇದಾರ್ ಅಥವಾ ಉಪ ತಹಶೀಲ್ದಾರ್ ಒಂದು ಹುದ್ದೆಯಿದ್ದು, ಮಾಸಿಕ 55,000 ಸಾವಿರ ರೂ. ವೇತನ, ಐಟಿ ಸಿಬ್ಬಂದಿ ಅಥವಾ ವಿಧಿವಿಜ್ಞಾನ ದತ್ತಾಂಶ ವಿಜ್ಞಾನಿ ಒಂದು ಹುದ್ದೆಯಿದೆ. 50,000 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ಕಾನೂನು ಬೆರಳಚ್ಚುಗಾರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 24,000 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ, ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ, ಬಿಇ, ಬಿ.ಟೆಕ್ ಅಥವಾ ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಉಪ ತಹಶೀಲ್ದಾರ್ ಹುದ್ದೆಗೆ ಗರಿಷ್ಠ 65 ವರ್ಷ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ. ಉಳಿದ ಹುದ್ದೆಗಳಿಗೆ ನಿಯಮಾನುಸಾರ ವಯೋಮಿತಿ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಬದಲಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ. ಅಗತ್ಯ ದಾಖಲೆಗಳಾದ ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆ, ರೆಸ್ಯೂಮ್ ಇತ್ಯಾದಿಗಳನ್ನು ಲಗತ್ತಿಸಿ. ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು) ಬೆಂಗಳೂರು. ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಂದಾಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಲು ಸೂಚಿಸಲಾಗಿದೆ.

