KEA Recruitment: Applications invited for 3,991 Civil Police Constable Posts
x

ಸಾಂದರ್ಭಿಕ ಚಿತ್ರ

KEA Recruitment: 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಬೃಹತ್ ನೇಮಕಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂ. 10ರಿಂದಲೇ ಆರಂಭವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.


Click the Play button to hear this message in audio format

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಬೃಹತ್ ನೇಮಕಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂ. 10ರಿಂದಲೇ ಆರಂಭವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 3,991 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ವೃಂದ 596 ಹುದ್ದೆಗಳು, ಉಳಿಕೆ ಮೂಲ ವೃಂದ 3,395 ಹುದ್ದೆಗಳಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜು. 3ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


ಯಾವ ದಾಖಲೆಗಳು ಅಗತ್ಯ

ಅರ್ಜಿ ಸಲ್ಲಿಸುವಾಗ ಯಾವುದೇ ಗೊಂದಲ ಉಂಟಾಗದಂತೆ ಅಭ್ಯರ್ಥಿಗಳು ಅಗತ್ಯ ಪ್ರಮಾಣಪತ್ರಗಳನ್ನು ಮೊದಲೇ ಸಿದ್ಧಪಡಿಸಿಟ್ಟುಕೊಳ್ಳಲು ಸೂಚಿಸಲಾಗಿದ್ದು, ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಒಳಮೀಸಲಾತಿ ಅನ್ವಯ ತಮಗೆ ಅನ್ವಯವಾಗುವ ಎಸ್ಸಿ-ಎ, ಎಸ್ಸಿ-ಬಿ ಮತ್ತು ಎಸ್ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಗ್ರಾಮೀಣ ಹಾಗೂ ಕನ್ನಡ ಮಾಧ್ಯಮ ವ್ಯಾಸಂಗ ಮೀಸಲಾತಿ ಕೋರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರಗಳನ್ನು ರೆಡಿ ಇಟ್ಟುಕೊಳ್ಳಬೇಕು.

ಜು.3 ಕೊನೆ ದಿನ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗ್ರಾಮೀಣ ಕೋಟಾದ ಸೌಲಭ್ಯ ಪಡೆಯಬೇಕಾದರೆ ಕಡ್ಡಾಯವಾಗಿ ನಾನ್ ಕ್ರೀಮಿಲೇಯರ್ ಸರ್ಟಿಫಿಕೇಟ್ ಹೊಂದಿರಬೇಕು. ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಸೈಜ್ 50kb ಒಳಗಿರಬೇಕು. ಅರ್ಜಿ ಸಲ್ಲಿಸಲು ಜು. 3 ಕೊನೆಯ ದಿನಾಂಕವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Read More
Next Story