
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ
Job News |ಮೈಸೂರು ಮುಕ್ತ ವಿವಿಯ ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ; ಮೇ 10 ಕೊನೆಯ ದಿನ
ಉಪಕುಲಪತಿಗೆ ಅರ್ಜಿ ಸಲ್ಲಿಸಲು ಯುಜಿಸಿ (UGC) ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾಯ್ದೆಯಂತೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರತಿಷ್ಠಿತ ಉಪಕುಲಪತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏ. 2, ರಂದು ಹೊರಡಿಸಲಾದ ಅಧಿಕೃತ ಅಧಿಸೂಚನೆಯಂತೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಸಕ್ತರು ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉಪಕುಲಪತಿಗೆ ಅರ್ಜಿ ಸಲ್ಲಿಸಲು ಯುಜಿಸಿ (UGC) ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾಯ್ದೆಯಂತೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು. ಸರ್ಕಾರದ ನಿಯಮಾವಳಿಗಳ ಅನ್ವಯ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯವಿರುವ ಸ್ವಯಂ-ದೃಢೀಕೃತ ದಾಖಲೆಗಳಾದ ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆಗಳು, ಅನುಭವದ ಪತ್ರ, ರೆಸ್ಯೂಮ್ ಇತ್ಯಾದಿಗಳನ್ನು ಲಗತ್ತಿಸಬೇಕು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿ.ಬಿ. ಸಂಖ್ಯೆ 5033, ಲೋಕ ಭವನ, ಬೆಂಗಳೂರು-560001ಗೆ ಅರ್ಜಿಯ ಸಾಫ್ಟ್ ಪ್ರತಿಯನ್ನು ಕಡ್ಡಾಯವಾಗಿ ಇಮೇಲ್ ಮೂಲಕ us.university.rb@karnataka.gov.in ಗೆ ಕಳುಹಿಸಬೇಕು.
ಮೆ.10 ಕೊನೆಯ ದಿನಾಂಕ
ಅರ್ಜಿ ಸಲ್ಲಿಕೆಗೆ ಏ. 2, ಆರಂಭಿಕ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಮೇ. 10 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಸಂವಹನಕ್ಕಾಗಿ ಸರಿಯಾದ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನೀಡುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

