
ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಕೇಂದ್ರ ಕಚೇರಿ
Job News | NHPC ಯಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 1.60 ಲಕ್ಷ ರೂ. ವರೆಗೆ ವೇತನ!
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ, ಬಿ.ಟೆಕ್ ಅಥವಾ ಬಿ.ಎಸ್‌ಸಿ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಕೇಂದ್ರ ಸರ್ಕಾರ ಸ್ವಾಮ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಸಂಸ್ಥೆಯಾದ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಖಾಲಿ ಇರುವ ಟ್ರೈನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವೀಧರರಿಗೆ ಅಖಿಲ ಭಾರತ ಮಟ್ಟದಲ್ಲಿ ವೃತ್ತಿಜೀವನ ಆರಂಭಿಸಲು ಇದು ಉತ್ತಮ ಅವಕಾಶವಾಗಿದ್ದು, ಒಟ್ಟು 81 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾವ ವಿಭಾಗದಲ್ಲಿ ಹುದ್ದೆ
ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ವಿಭಾಗದಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗೆ ವಿಶೇಷ ಭತ್ಯೆಗಳೂ ಸೇರಿ ತಿಂಗಳಿಗೆ 50 ಸಾವಿರ ರೂ. ನಿಂದ 1.60 ಲಕ್ಷ ರೂ. ವರೆಗೆ ಸಂಬಳ ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡಗಳು
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ, ಬಿ.ಟೆಕ್ ಅಥವಾ ಬಿ.ಎಸ್‌ಸಿ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಏಪ್ರಿಲ್ 6 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು. ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೇವಲ ಲಿಖಿತ ಪರೀಕ್ಷೆಯ ಮೂಲಕವಲ್ಲದೆ, ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನದಲ್ಲಿ ಪಡೆದ ಅಂಕಗಳ ಮೇಲೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಶುಲ್ಕದ ವಿವರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ವಿಕಲಚೇತನರು ಹಾಗೂ ಮಾಜಿ ಸೈನಿಕರಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದ್ದು, ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು 708 ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಎನ್‌ಎಚ್‌ಪಿಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ನೀಡಲಾದ 'Careers' ವಿಭಾಗದಲ್ಲಿ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸುವ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಕೊನೆಗೆ ಅರ್ಜಿ ಸಂಖ್ಯೆಯನ್ನು ನಮೂದು ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

