NWKRTC recruitment: Written exam for various posts on April 9, guidelines announced
x

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪ್ರಕಟಣೆ

NWKRTC recruitment : ಏ. 9ಕ್ಕೆ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ, ಮಾರ್ಗಸೂಚಿ ಪ್ರಕಟ

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ಹಾಗೂ ಮುಖಚಹರೆ ಪರಿಶೀಲಿಸಿ ಪ್ರವೇಶ ನೀಡುವುದರಿಂದ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರತಕ್ಕದ್ದು ಎಂದು ಕೆಇಎ ತಿಳಿಸಿದೆ.


Click the Play button to hear this message in audio format

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಏಪ್ರಿಲ್ 9ರಂದು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ (ಮಾ.9) ಪ್ರಕಟಣೆ ಹೊರಡಿಸಿರುವ ಅವರು, ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ ಸೇರಿದಂತೆ ಗ್ರೇಡ್-2 ಅಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಬಹುದು. ಸದ್ಯದಲ್ಲೇ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ಕೆಇಎ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಕೋರಲಾಗಿದೆ.

ಯಾವ್ಯಾವ ಹುದ್ದೆಗಳಿಗೆ ಪರೀಕ್ಷೆ ?

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ ಮತ್ತು ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ -1 ಹಾಗೂ ಮಧ್ಯಾಹ್ನ 2.30 ರಿಂದ 4.30ರವರೆಗೆ ನಿರ್ಧಿಷ್ಟ ಪತ್ರಿಕೆ ಇರಲಿದ್ದು ಎರಡು ಪತ್ರಿಕೆಗಳಲ್ಲಿ ತಲಾ 100 ಪ್ರಶ್ನೆಗಳಿದ್ದು 300 ಅಂಕ ನಿಗದಿಪಡಿಸಲಾಗಿದೆ.

0.75 ಋಣಾತ್ಮಕ ಅಂಕ

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ಹಾಗೂ ಮುಖಚಹರೆ ಪರಿಶೀಲಿಸಿ ಪ್ರವೇಶ ನೀಡುವುದರಿಂದ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರತಕ್ಕದ್ದು. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು (0.75) ಅಂಕಗಳನ್ನು ಕಡಿತಗೊಳಿಸಲಾಗುವುದು. ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಐದನೇ ಆಯ್ಕೆ ವೃತ್ತವನ್ನು ಶೇಡ್ ಮಾಡಲು ಕೊನೆಯ ಬೆಲ್ ಆದ ನಂತರ ಹೆಚ್ಚುವರಿಯಾಗಿ ಐದು ನಿಮಿಷಗಳನ್ನು ನೀಡಲಾಗುವುದು. ಯಾವುದೇ ಆಯ್ಕೆಯನ್ನು ಅಥವಾ ವೃತ್ತವನ್ನು ಶೇಡ್ ಮಾಡಿಲ್ಲದಿದ್ದರೆ, ಪ್ರತೀ ಪ್ರಶ್ನೆಗೆ 1/4 ರಷ್ಟು (0.75) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More
Next Story