Job News | ರಕ್ಷಣಾ ಇಲಾಖೆಯಲ್ಲಿ ಉದ್ಯೋಗಾವಕಾಶ, 50 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
x

ಸಾಂದರ್ಭಿಕ ಚಿತ್ರ

Job News | ರಕ್ಷಣಾ ಇಲಾಖೆಯಲ್ಲಿ ಉದ್ಯೋಗಾವಕಾಶ, 50 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಏ. 15, 2021ರ ನಂತರ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿದವರು ಈ ಹುದ್ದೆಗೆ ಅರ್ಹರಲ್ಲ.


Click the Play button to hear this message in audio format

ನೀವು ಡಿಪ್ಲೊಮಾ ಮುಗಿಸಿ ಉತ್ತಮ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಮುನಿಷನ್ಸ್ ಇಂಡಿಯಾ ಲಿಮಿಟೆಡ್ (MIL) ನ ಅಂಗಸಂಸ್ಥೆಯಾದ ಆರ್ಡನೆನ್ಸ್ ಫ್ಯಾಕ್ಟರಿ ಭಂಡಾರವು 2026ನೇ ಸಾಲಿನ ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಒಟ್ಟು 50 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವಿಲ್ಲದೆ ಕೇವಲ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನಾಂಕವಾಗಿದೆ.

ಯಾವ ವಿಭಾಗಗಳಲ್ಲಿ ಎಷ್ಟೆಷ್ಟು ಹುದ್ದೆಗಳು?

ನಾಲ್ಕು ಪ್ರಮುಖ ಎಂಜಿನಿಯರಿಂಗ್ ವಿಭಾಗಗಳಲ್ಲಿ ಈ ಕೆಳಗಿನಂತೆ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ 15 ಹುದ್ದೆಗಳು, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 15 ಹುದ್ದೆಗಳು, ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ 10 ಹುದ್ದೆಗಳು ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್‌ಗೆ 10 ಹುದ್ದೆಗಳನ್ನು ನಿಗದಿಪಡಿಸಿದೆ.

ಅರ್ಹತೆಗಳೇನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಏ. 15, 2021ರ ನಂತರ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿದವರು ಈ ಹುದ್ದೆಗೆ ಅರ್ಹರಲ್ಲ. ಕನಿಷ್ಠ ವಯಸ್ಸು 14 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿಯ ನಿರ್ಬಂಧವಿಲ್ಲ ಎಂದು ತಿಳಿಸಿದೆ.

ವೇತನ ಮತ್ತು ತರಬೇತಿ ಅವಧಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿ ಇರಲಿದ್ದು, ಪ್ರತಿ ತಿಂಗಳು 10,900 ಸ್ಟೈಫಂಡ್ ನೀಡಲಾಗುತ್ತದೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಈ ಉದ್ಯೋಗ ಸ್ಥಳವಿರಲಿದೆ. ಈ ನೇಮಕಾತಿಯಲ್ಲಿ ಪರೀಕ್ಷೆಯ ಭೀತಿ ಇಲ್ಲ! ಡಿಪ್ಲೊಮಾದಲ್ಲಿ ಅಭ್ಯರ್ಥಿಗಳು ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಇದು ಸಂಪೂರ್ಣವಾಗಿ ಆಫ್‌ಲೈನ್ ಪ್ರಕ್ರಿಯೆಯಾಗಿದ್ದು, ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಕಳುಹಿಸಬೇಕಾಗುತ್ತದೆ. ನಿಮ್ಮ ಕಾಲೇಜಿನಲ್ಲಿ CGPA ಅಥವಾ SGPA ಗ್ರೇಡಿಂಗ್ ಇದ್ದರೆ, ಅದನ್ನು ಶೇಕಡಾವಾರು ಅಂಕಗಳಾಗಿ ಪರಿವರ್ತಿಸಿದ ಅಧಿಕೃತ ದಾಖಲೆಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿ ಇರುವವರು ತಡಮಾಡದೆ ಕೂಡಲೇ ಅರ್ಜಿ ಸಲ್ಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More
Next Story