
ಸಾಂದರ್ಭಿಕ ಚಿತ್ರ
Job News | ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ 400 ಹುದ್ದೆಗಳ ಭರ್ತಿ: ಐಟಿಐ ಪಾಸಾದವರಿಗೆ ಸುವರ್ಣಾವಕಾಶ!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಉತ್ತೀರ್ಣರಾಗಿರಬೇಕು. ಮಾರ್ಚ್ 28ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರ್ಣಗೊಳಿಸಿರಬೇಕು.
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿನ ಆರ್ಡನೆನ್ಸ್ ಫ್ಯಾಕ್ಟರಿ ಭಂಡಾರ (OFBA) ಸಿಹಿ ಸುದ್ದಿ ನೀಡಿದೆ. ಇಲ್ಲಿ ಖಾಲಿ ಇರುವ 'ಡೇಂಜರ್ ಬಿಲ್ಡಿಂಗ್ ವರ್ಕರ್' (DBW) ಹುದ್ದೆಗಳ ಭರ್ತಿಗೆ ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕವಾಗಿದೆ.
ಈ ಅಧಿಸೂಚನೆಯಲ್ಲಿ ಒಟ್ಟು 400 ಡೇಂಜರ್ ಬಿಲ್ಡಿಂಗ್ ವರ್ಕರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ. ವೇತನ ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಪೂರ್ಣಗೊಳಿಸಿರಬೇಕು. ಮಾರ್ಚ್ 28ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು. ಸರ್ಕಾರದ ನಿಯಮದಂತೆ ಹಿಂದುಳಿಸದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಆನ್‌ಲೈನ್ ಬದಲಿಗೆ ಆಫ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.
* ಮೊದಲು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
* ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
* ಅಗತ್ಯ ದಾಖಲೆಗಳಾದ ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆ, ಜಾತಿ ಪ್ರಮಾಣಪತ್ರ ಇತ್ಯಾದಿಗಳನ್ನು ಸ್ವಯಂ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ.
* ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಿ.
* ಅರ್ಜಿ ಸಲ್ಲಿಸಬೇಕಾದ ವಿಳಾಸ: ಮುಖ್ಯ ಜನರಲ್ ಮ್ಯಾನೇಜರ್, ಆರ್ಡನೆನ್ಸ್ ಫ್ಯಾಕ್ಟರಿ ಭಂಡಾರ ಜಿಲ್ಲೆ, ಮಹಾರಾಷ್ಟ್ರ, ಪಿನ್-441906.

