SBI Recruitment | Applications invited for 131 Specialist Officer posts, salary up to 50 lakhs!
x

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಸಾಂದರ್ಭಿಕ ಚಿತ್ರ)

SBI ನೇಮಕಾತಿ| 131 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 50 ಲಕ್ಷ ರೂ.ವರೆಗೆ ಸಂಬಳ!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಇ, ಬಿ.ಟೆಕ್, ಎಂಬಿಎ, ಸಿಎ, ಅಥವಾ ಎಂಸಿಎ ಪದವೀಧರರು ಅರ್ಜಿ ಸಲ್ಲಿಸಬಹುದು.


Click the Play button to hear this message in audio format

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದ, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 131 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳನ್ನು ಭರ್ತಿ ಮಾಡಲು 4 ಪ್ರಮುಖ ಅಧಿಸೂಚನೆಗಳನ್ನು ಹೊರಡಿಸಿದೆ. ಐಟಿ ಭದ್ರತೆ, ಹವಾಮಾನ ಅಪಾಯ ನಿರ್ವಹಣೆ ಮತ್ತು ಆಂತರಿಕ ಲೆಕ್ಕಪರಿಶೋಧನೆಯಂತಹ ವಿಶೇಷ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದವರಿಗೆ ಇದು ಸುವರ್ಣಾವಕಾಶವಾಗಿದೆ.

ಎಷ್ಟು ಹುದ್ದೆಗಳಿವೆ ?

ಒಟ್ಟು 131 ಹುದ್ದೆಗಳಲ್ಲಿ ಖಾಯಂ ಮತ್ತು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಹವಾಮಾನ ಅಪಾಯ ನಿರ್ವಹಣೆಯ ಮ್ಯಾನೆಜರ್‌ 2 ಹುದ್ದೆಗಳು, ಮಾಹಿತಿ ತಂತ್ರಜ್ಞಾನ ಡೆಪ್ಯುಟಿ ಮ್ಯಾನೆಜರ್‌ 12 ಹುದ್ದೆಗಳು, ವ್ಯವಹಾರ ವಿಶ್ಲೇಷಕ 1 ಹುದ್ದೆ ಹಾಗೂ ಐಎಸ್ ಆಡಿಟ್ ಮತ್ತು ಇಂಟರ್ನಲ್ ಆಡಿಟ್ ಸೇರಿದಂತೆ ಒಟ್ಟು 131 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ

ಖಾಯಂ ಗುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 25 ಲಕ್ಷ ರೂ. ನಿಂದ 50 ಲಕ್ಷ ರೂ. ನೀಡಲಾಗುತ್ತದೆ. ಒಪ್ಪಂದದ ಆಧಾರದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ಭತ್ಯೆಗಳೊಂದಿಗೆ ಉತ್ತಮ ವೇತನ ದೊರೆಯಲಿದೆ.

ಶೈಕ್ಷಣಿಕ ಅರ್ಹತೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಇ, ಬಿ.ಟೆಕ್, ಎಂಬಿಎ, ಸಿಎ, ಅಥವಾ ಎಂಸಿಎ ಪದವೀಧರರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅನುಗುಣವಾಗಿ 1 ರಿಂದ 6 ವರ್ಷಗಳ ವೃತ್ತಿ ಅನುಭವ ಅಗತ್ಯವಾಗಿದ್ದು, ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಿದೆ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂ. ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಲಕಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಿ ನಂತರ 100 ಅಂಕಗಳ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್ ಅರ್ಜಿಗಾಗಿ ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವುದು ಹೇಗೆ ?

* ಅಧಿಕೃತ ಎಸ್‌ಬಿಐ ನೇಮಕಾತಿ ಪೋರ್ಟಲ್‌ಗೆ ಭೇಟಿ ನೀಡಿ.

* ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿ.

* ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆಗಳು ಮತ್ತು ಅನುಭವದ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ.

* ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

* ಆನ್‌ಲೈನ್ ಪಾವತಿ ಗೇಟ್‌ವೇ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್) ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.

* ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ದಾಖಲೆಗಳಿಗಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story