
ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳು (ಸಾಂದರ್ಭಿಕ ಚಿತ್ರ)
Job News | ದಕ್ಷಿಣ ಮಧ್ಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ, ಐಟಿಐ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ!
ಎಲೆಕ್ಟ್ರಿಷಿಯನ್, ಫಿಟ್ಟರ್, ಎಸಿ ಮೆಕ್ಯಾನಿಕ್, ವೆಲ್ಡರ್, ಡೀಸೆಲ್ ಮೆಕ್ಯಾನಿಕ್, ಕಾರ್ಪೆಂಟರ್, ಪೇಂಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ನೀವು ರೈಲ್ವೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುತ್ತೀರಾ? ಹಾಗಿದ್ದರೆ ನಿಮಗೊಂದು ಸಿಹಿಸುದ್ದಿ. ದಕ್ಷಿಣ ಮಧ್ಯ ರೈಲ್ವೆಯು (SCR) 2026ನೇ ಸಾಲಿನ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನಾಂಕವಾಗಿದೆ.
ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ವಿವಿಧ ತಾಂತ್ರಿಕ ವಿಭಾಗಗಳಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಎಲೆಕ್ಟ್ರಿಷಿಯನ್ ವಿಭಾಗದಲ್ಲಿ 1,258, ಫಿಟ್ಟರ್ ವಿಭಾಗದಲ್ಲಿ 539, ಎಸಿ ಮೆಕ್ಯಾನಿಕ್ ವಿಭಾಗದಲ್ಲಿ 251, ವೆಲ್ಡರ್ ವಿಭಾಗದಲ್ಲಿ 202, ಡೀಸೆಲ್ ಮೆಕ್ಯಾನಿಕ್ ವಿಭಾಗದಲ್ಲಿ 105, ಕಾರ್ಪೆಂಟರ್, ಮ್ಯಾಷಿನಿಸ್ಟ್, ಪೇಂಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಹತೆ ಮತ್ತು ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿಯೊಂದಿಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು. ಏಪ್ರಿಲ್ 11 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸಾಗಿರಬೇಕು. ಕೇಂದ್ರ ಸರ್ಕಾರದ ನಿಯಮದಂತೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಹೇಗೆ ?
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮತ್ತು ತೃತೀಯ ಲಿಂಗಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ರೈಲ್ವೆ ನಿಯಮಗಳ ಪ್ರಕಾರ ಮಾಸಿಕ ವೇತನ (Stipend) ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
* ಆಸಕ್ತ ಅಭ್ಯರ್ಥಿಗಳು ಮೊದಲನೆಯದಾಗಿ ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು.
* ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.
* ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
* ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಕ್ಲಿಕ್ ಮಾಡಿ.
* ಸೌತ್ ಸೆಂಟ್ರಲ್ ರೈಲ್ವೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
* ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
* ಕೊನೆಯದಾಗಿ ದಕ್ಷಿಣ ಸೆಂಟ್ರಲ್ ರೈಲ್ವೆ ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ನೆನಪಿಟ್ಟುಕೊಳ್ಳುವಂತೆ ರೈಲ್ವೆ ಇಲಾಖೆ ಪ್ರಕ್ರಟಣೆಯಲ್ಲಿ ತಿಳಿಸಿದೆ.

