
ಸಶಸ್ತ್ರ ಸೀಮಾಬಲದ ಸೈನಿಕರು
Job News | 10th, ಐಟಿಐ ಪಾಸ್ ಆಗಿದೆಯೇ ? SSB ಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಲು ಸುವರ್ಣಾವಕಾಶ!
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ ಹಾಗೂ ಸಂದರ್ಶನ ಮತ್ತು ವೈದ್ಯಕೀಯ ತಪಾಸಣೆ ನಡೆಸಲಾಗುವುದು.
ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲದಲ್ಲಿ (SSB) ಖಾಲಿ ಇರುವ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅರ್ಹ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಏ.19 ಕೊನೆಯ ದಿನಾಂಕವಾಗಿದೆ.
ಒಟ್ಟು 233 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹೆಡ್ ಕಾನ್ಸ್‌ಟೇಬಲ್ ಸಂವಹನ 197 ಹುದ್ದೆಗಳು, ಎಲೆಕ್ಟ್ರಿಷಿಯನ್ 29 ಹುದ್ದೆಗಳು, ಪಶುವೈದ್ಯಕೀಯ 5 ಹುದ್ದೆಗಳು ಹಾಗೂ ಸ್ಟೀವರ್ಡ್ ವಿಭಾಗಕ್ಕೆ 2 ಹುದ್ದೆಗಳನ್ನು ವಿಂಗಡಿಸಲಾಗಿದೆ.
ಅರ್ಹತೆ ಮತ್ತು ವೇತನ ಶ್ರೇಣಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಶಿಕ್ಷಣ ಮಂಡಳಿಯಿಂದ ಹುದ್ದೆಗೆ ಅನುಗುಣವಾಗಿ 10ನೇ ತರಗತಿ, 12ನೇ ತರಗತಿ ಹಾಗೂ ಐಟಿಐ ಅಥವಾ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ 27 ವರ್ಷ ವಯೋಮಿತಿ ಮೀರಿರಬಾರದು. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500 ರೂ. ರಿಂದ 81,100 ರೂ. ವರೆಗೆ ವೇತನ ದೊರೆಯಲಿದೆ.
ಆಯ್ಕೆ ವಿಧಾನ ಹಾಗೂ ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ ಹಾಗೂ ಸಂದರ್ಶನ ಮತ್ತು ವೈದ್ಯಕೀಯ ತಪಾಸಣೆ ನಡೆಸಲಾಗುವುದು. ಸಾಮಾನ್ಯ ವರ್ಗ, ಆರ್ಥಿಕವಾಗಿ ಹೀಮದುಳಿದ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
* ಅರ್ಜಿ ಸಲ್ಲಿಸುವಾಗ ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.
* ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
* ಕೊನೆಯದಾಗಿ SSB ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೇವ್ ಬಟನ್ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

