
ತುಮಕೂರು ಮಹಾನಗರ ಪಾಲಿಕೆ
Job News | ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಆಹ್ವಾನ; ಏ. 8 ಕೊನೆಯ ದಿನ
ಪಾಲಿಕೆ ವ್ಯಾಪ್ತಿಯಲ್ಲಿನ ಒಟ್ಟು 238 ಹುದ್ದೆಗಳಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಬಾರದು.
ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 238 ಪೌರಕಾರ್ಮಿಕ (ನಾಗರಿಕ ಸೇವಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿನ ಒಟ್ಟು 238 ಹುದ್ದೆಗಳಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಬಾರದು. ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಬದಲಿಗೆ ಆಫ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ತುಮಕೂರು ಮಹಾನಗರ ಪಾಲಿಕೆ ಅಥವಾ ತಿಪಟೂರು, ಶಿರಾ ನಗರಸಭೆ ಕಚೇರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ಏ. 8 ಕೊನೆಯ ದಿನಾಂಕವಾಗಿದ್ದು, ಕಚೇರಿಯಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಲು ಏ.9 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಲು ಹಾಗೂ ನಿಗದಿತ ಸಮಯದೊಳಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ಮಹಾನಗರ ಪಾಲಿಕೆಯ ಅಧಿಕೃತ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

