Job openings in Yadgir District Court: Applications invited for 14 posts
x

ಯಾದಗಿರಿ ಜಿಲ್ಲಾ ನ್ಯಾಯಾಲಯ

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: 14 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು 14 ಹುದ್ದೆಗಳ ಪೈಕಿ 9 ಪ್ರೊಸೆಸ್ ಸರ್ವರ್ ಹಾಗೂ 5 ಪ್ಯೂನ್ ಅಥವಾ ಜವಾನ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.


Click the Play button to hear this message in audio format

ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ (Yadgiri District Court) ಖಾಲಿ ಇರುವ ಒಟ್ಟು 14 ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ (Notification 2026) ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 12, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ

ಒಟ್ಟು 14 ಹುದ್ದೆಗಳ ಪೈಕಿ 9 ಪ್ರೊಸೆಸ್ ಸರ್ವರ್ (Process Server) ಹಾಗೂ 5 ಪ್ಯೂನ್ ಅಥವಾ ಜವಾನ (Peon) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್‌ಎಸ್‌ಎಲ್‌ಸಿ (SSLC) / 10ನೇ ತರಗತಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಮತ್ತು ಸಡಿಲಿಕೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST) ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ.

- ಹಿಂದುಳಿದ ವರ್ಗಗಳಾದ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.

- ಅಂಗವಿಕಲ/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ವೇತನ ಮತ್ತು ಅರ್ಜಿ ಶುಲ್ಕ

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ 27,000 ರೂ. ಗಳಿಂದ 61,300 ರೂ. ವರೆಗೆ ಆಕರ್ಷಕ ವೇತನ ಶ್ರೇಣಿ ಸಿಗಲಿದೆ. ಅರ್ಜಿ ಶುಲ್ಕದ ವಿವರ ಹೀಗಿದೆ: [ka.indgovtjobs]

- ಸಾಮಾನ್ಯ (General) ವರ್ಗದ ಅಭ್ಯರ್ಥಿಗಳಿಗೆ: 200 ರೂ.

- SC/ST, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: 100 ರೂ.

ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

1. ಅಭ್ಯರ್ಥಿಗಳು ಮೊದಲಿಗೆ ಯಾದಗಿರಿ ಇ-ಕೋರ್ಟ್ಸ್ ಅಧಿಕೃತ ವೆಬ್‌ಸೈಟ್‌ಗೆ (yadgir.dcourts.gov.in) ಭೇಟಿ ನೀಡಬೇಕು.

2. ಆನ್‌ಲೈನ್ ನೇಮಕಾತಿ ಲಿಂಕ್‌ ಮೇಲೆ ಕ್ಲಿಕ್ ಮಾಡಿ, ನೀವು ಬಯಸುವ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ.

3. ಆನ್‌ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.

4. ಸೂಚಿಸಿದ ಅಳತೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬಹುದು.

Read More
Next Story