
ಮೃತಪಟ್ಟ ಬಾಲಕ ದರ್ಶನ್
ಬಾಗಲಕೋಟೆ| ಮಳೆ ಆರ್ಭಟಕ್ಕೆ ಗೋಡೆ ಕುಸಿದು 11 ವರ್ಷದ ಬಾಲಕ ಸಾವು
ಬೆಳಿಗ್ಗೆ ತಾಯಿ ಬೇರೆ ಕೊಠಡಿಗೆ ತೆರಳಿದ ಕೆಲವೇ ಕ್ಷಣಗಳಲ್ಲಿ, ಏಕಾಏಕಿ ಗೋಡೆ ಮತ್ತು ಛಾವಣಿ ಕುಸಿದು ಬಿದ್ದಿದೆ. ಇದರ ಪರಿಣಾಮ ದರ್ಶನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಶ್ರೀಶೈಲ ತೀವ್ರವಾಗಿ ಗಾಯಗೊಂಡಿದ್ದಾನೆ.
ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು11 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬಾಲಕ ದರ್ಶನ್ ಲಾತೂರ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಸಹೋದರ ಶ್ರೀಶೈಲ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳು ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಗಿನ ಜಾವ ಸುಮಾರು 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಾಗಪ್ಪ ಲಾತೂರ್ ಎಂಬುವವರ ಮಕ್ಕಳಾದ ದರ್ಶನ್ ಮತ್ತು ಶ್ರೀಶೈಲ ತಮ್ಮ ತಾಯಿಯೊಂದಿಗೆ ಮನೆಯ ಒಂದು ಕೊಠಡಿಯಲ್ಲಿ ಮಲಗಿದ್ದರು. ಬೆಳಿಗ್ಗೆ ತಾಯಿ ಬೇರೆ ಕೊಠಡಿಗೆ ತೆರಳಿದ ಕೆಲವೇ ಕ್ಷಣಗಳಲ್ಲಿ, ಏಕಾಏಕಿ ಗೋಡೆ ಮತ್ತು ಛಾವಣಿ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ, ದರ್ಶನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಶ್ರೀಶೈಲ ತೀವ್ರವಾಗಿ ಗಾಯಗೊಂಡಿದ್ದಾನೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆಯ ಕಾರಣದಿಂದಾಗಿ ಹಳೆಯ ಮನೆಯ ಗೋಡೆಯ ರಚನೆಯು ದುರ್ಬಲಗೊಂಡಿದ್ದು, ಅದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಧಿಕಾರಿಗಳು ಈ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕೆಲ ತಗ್ಗು ಪ್ರದೇಶಗಳು ಮತ್ತು ಸೇತುವೆಗಳು ಜಲಾವೃತವಾಗಿವೆ. ಬಾದಾಮಿ ಪಟ್ಟಣದ ಕೆಲ ಮನೆಗಳಿಗೆ ನೀರು ನುಗ್ಗಿದ ವರದಿಯಾಗಿದೆ.
ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 26 ರಿಂದ 28ರವರೆಗೆ ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.